ಬುಧವಾರ, ಸೆಪ್ಟೆಂಬರ್ 29, 2021
20 °C

Tokyo Olympics | ಪದಕದ ಸುತ್ತಿಗೆ ಲಗ್ಗೆಯಿಟ್ಟ ಶೂಟರ್ ಸೌರಭ್ ಚೌಧರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ 10 ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಫೈನಲ್‌ಗೆ ಲಗ್ಗೆಯಿಟ್ಟಿರುವ ಭಾರತದ ಸೌರಭ್ ಚೌಧರಿ ಪದಕದ ನಿರೀಕ್ಷೆ ಮೂಡಿಸಿದ್ದಾರೆ. 

ಶನಿವಾರ ನಡೆದ ಪುರುಷರ 10 ಮೀ. ಏರ್ ಪಿಸ್ತೂಲ್ ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿರುವ ಸೌರಭ್ ಅಮೋಘ ಸಾಧನೆ ಮಾಡಿದರು. 

ಪದಕ ಸುತ್ತಿನಲ್ಲೂ ಇದೇ ಪ್ರದರ್ಶನ ನೀಡಲು ಸಾಧ್ಯವಾದರೆ ಸೌರಭ‌್‌ಗೆ ಇತಿಹಾಸ ರಚಿಸುವ ಸುವರ್ಣಾವಕಾಶವಿದೆ. 

ಫೈನಲ್ ಹಂತವು ಭಾರತೀಯ ಕಾಲಮಾನ ಇಂದು ಅಪರಾಹ್ನ 12ಕ್ಕೆ ಸರಿಯಾಗಿ ಆರಂಭವಾಗಲಿದೆ. 

ಇದೇ ವಿಭಾಗದಲ್ಲಿ ಸ್ಪರ್ಧಿಸಿದ ಭಾರತದವರೇ ಆದ ಅಭಿಶೇಕ್ ವರ್ಮಾ 17ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು