ಗುರುವಾರ , ಮಾರ್ಚ್ 23, 2023
31 °C

Tokyo Olympics | ಸ್ಕೇಟ್‌ಬೋರ್ಡಿಂಗ್‌ನಲ್ಲಿ ವಿಶ್ವ ಗೆದ್ದ ಬಾಲಕಿಯರು

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ಟೋಕಿಯೊ: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಸ್ಕೇಟ್‌ಬೋರ್ಡಿಂಗ್ ಸ್ಪರ್ಧೆಯಲ್ಲಿ ಬಾಲಕಿಯರು ಅಮೋಘ ಸಾಧನೆ ಮಾಡಿದ್ದಾರೆ. ಮಹಿಳೆಯರ ಸ್ಕೇಟ್‌ಬೋರ್ಡಿಂಗ್ ಪಾರ್ಕ್ ಸ್ಪರ್ಧೆಯಲ್ಲಿ 19 ವರ್ಷದ ಜಪಾನ್‌ನ ಸಕುರಾ ಯೊಸೊಝುಮಿ ಚಿನ್ನದ ಪದಕ ಜಯಿಸಿದ್ದಾರೆ.

ಆತಿಥೇಯ ಜಪಾನ್‌ ಮೂಲದವರೇ ಆದ 12 ವರ್ಷದ ಕೊಕೊನಾ ಹಿರಾಕಿ ಬೆಳ್ಳಿ ಮತ್ತು 13 ವರ್ಷದ ಬ್ರಿಟನ್‌ನ ಸ್ಕೈ ಬ್ರೌನ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಇದನ್ನೂ ಓದಿ: 

 

 

 

ಬ್ರಿಟನ್‌ನ ಸ್ಕೈ ಬ್ರೌನ್ ಪದಕ ಗೆಲ್ಲುವ ನೆಚ್ಚಿನ ತಾರೆಯಾಗಿ ಹೊರಹೊಮ್ಮಿದ್ದರು. ಆದರೆ ಪದಕ ಸುತ್ತಿನಲ್ಲಿ ಅಲ್ಪ ಹಿನ್ನಡೆ ಅನುಭವಿಸಿದ ಪರಿಣಾಮ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.

 

1970ರ ದಶಕದಲ್ಲಿ ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ಖಾಲಿ ಈಜುಕೊಳದಿಂದ ಉದಯಿಸಿರುವ ಈ ರೀತಿಯ ಸ್ಕೇಟ್‌ಬೋರ್ಡಿಂಗ್ ಸ್ಪರ್ಧೆಯು ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಕಾಣಿಸಿಕೊಂಡಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು