ಮಂಗಳವಾರ, ಸೆಪ್ಟೆಂಬರ್ 28, 2021
21 °C

Tokyo Olympics: ಬ್ಯಾಸ್ಕೆಟ್‌ಬಾಲ್‌ ಸ್ಪರ್ಧೆಯಲ್ಲಿ ಜಾದೂ ಮಾಡಿದ ಜಪಾನ್‌

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಸಾಯ್‌ತಮಾ: ಜಪಾನ್‌ ಮಹಿಳಾ ತಂಡದವರು ಒಲಿಂಪಿಕ್ಸ್‌ನ ಬ್ಯಾಸ್ಕೆಟ್‌ಬಾಲ್‌ ಸ್ಪರ್ಧೆಯಲ್ಲಿ ಚೊಚ್ಚಲ ಬಾರಿಗೆ ಫೈನಲ್‌ ಪ್ರವೇಶಿಸಿದ್ದಾರೆ.

ಶುಕ್ರವಾರ ನಡೆದ ಫೈನಲ್‌ ಹಣಾಹಣಿಯಲ್ಲಿ ಜಪಾನ್‌ 87–71 ಪಾಯಿಂಟ್ಸ್‌ನಿಂದ ಫ್ರಾನ್ಸ್‌ ತಂಡವನ್ನು ಪರಾಭವಗೊಳಿಸಿತು. 

ಮೊದಲ ಕ್ವಾರ್ಟರ್‌ನಲ್ಲಿ 14–22ರಿಂದ ಹಿನ್ನಡೆ ಕಂಡಿದ್ದ ಜಪಾನ್‌ ಆಟಗಾರ್ತಿಯರು ಎರಡು ಮತ್ತು ಮೂರನೇ ಕ್ವಾರ್ಟರ್‌ಗಳಲ್ಲಿ ಪ್ರಾಬಲ್ಯ ಮೆರೆದರು. ಅಂತಿಮ ಕ್ವಾರ್ಟರ್‌ನಲ್ಲಿ ಫ್ರಾನ್ಸ್‌ ತಂಡ 21 ಪಾಯಿಂಟ್ಸ್‌ ಕಲೆಹಾಕಿದರೂ ಗೆಲುವು ದಕ್ಕಲಿಲ್ಲ.

ಭಾನುವಾರ ನಡೆಯುವ ಫೈನಲ್‌ ಪೈಪೋಟಿಯಲ್ಲಿ ಜಪಾನ್‌ ತಂಡಕ್ಕ ಬಲಿಷ್ಠ ಅಮೆರಿಕ ಸವಾಲು ಎದುರಾಗಲಿದೆ.

ನಾಲ್ಕರ ಘಟ್ಟದ ಮತ್ತೊಂದು ಪಂದ್ಯದಲ್ಲಿ ಅಮೆರಿಕ 79–59 ಪಾಯಿಂಟ್ಸ್‌ನಿಂದ ಸರ್ಬಿಯಾ ತಂಡವನ್ನು ಸೋಲಿಸಿತು. ಇದರೊಂದಿಗೆ ಸತತ ಏಳನೇ ಬಾರಿ ಒಲಿಂಪಿಕ್ಸ್‌ನಲ್ಲಿ ಫೈನಲ್‌ ತಲುಪಿದ ಸಾಧನೆ ಮಾಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು