ಭಾನುವಾರ, ಸೆಪ್ಟೆಂಬರ್ 19, 2021
24 °C

Tokyo Olympics | ಕುಸ್ತಿಯಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿದ ಬಜರಂಗ್ ಪೂನಿಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಬಾ: ಭಾರತದ ಭರವಸೆಯಾಗಿರುವ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ. 

ಪುರುಷರ 65 ಕೆ.ಜಿ. ಫ್ರೀಸ್ಟೈಲ್ ವಿಭಾಗದ ಕ್ವಾರ್ಟರ್‌ಫೈನಲ್‌ನಲ್ಲಿ ಬಜರಂಗ್ ಪೂನಿಯಾ ಇರಾನ್‌ನ ಮೊರ್ತೆಜಾ ಗಿಯಾಸಿ ವಿರುದ್ದ ಗೆಲುವು ದಾಖಲಿಸಿದರು. 

ಇದನ್ನೂ ಓದಿ: 

ಸೆಮಿಫೈನಲ್ ಕದನವು ಭಾರತೀಯ ಕಾಲಮಾನ ಅಪರಾಹ್ನ 2.52ಕ್ಕೆ ಸರಿಯಾಗಿ ಆರಂಭವಾಗಲಿದೆ. ಅಲ್ಲದೆ ಬಜರಂಗ್ ಪೂನಿಯಾ ಪದಕ ಗೆಲ್ಲುವ ಅಪಾರ ಭರವಸೆಯನ್ನು ಹೊಂದಿದ್ದಾರೆ. 
 

ಈ ಮೊದಲು ಪ್ರೀ-ಕ್ವಾರ್ಟರ್‌ಫೈನಲ್ ಮುಖಾಮುಖಿಯಲ್ಲಿ ಬಜರಂಗ್, ಕಿರ್ಗಿಸ್ತಾನದ ಎರ್ನಾಜರ್ ಅಕ್ಮಟಾಲೀವ್ ವಿರುದ್ಧ ಮೇಲುಗೈ ಸಾಧಿಸಿದರು. 

 

ಏತನ್ಮಧ್ಯೆ ಮಹಿಳೆಯರ 50 ಕೆ.ಜಿ. ವಿಭಾಗದಲ್ಲಿ ಸೋಲಿನ ಆಘಾತ ಎದುರಿಸಿರುವ ಸೀಮಾ ಬಿಸ್ಲಾ, ಹೊರಬಿದ್ದಿದ್ದಾರೆ. 

ಗುರುವಾರದಂದು ಪುರುಷರ 57 ಕೆ.ಜಿ ವಿಭಾಗದಲ್ಲಿ ಭಾರತದ 23 ವರ್ಷದ ರವಿಕುಮಾರ್ ದಹಿಯಾ ಬೆಳ್ಳಿ ಪದಕ ಜಯಿಸಿದ್ದರು. ಈ ಮೂಲಕ ಒಲಿಂಪಿಕ್ಸ್‌ ಕುಸ್ತಿಯಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಎರಡನೇ ಕುಸ್ತಿಪಟುವೆಂಬ ಹೆಗ್ಗಳಿಕೆಗೆ ಪಾತ್ರರಾದರು. 2012ರಲ್ಲಿ ನಡೆದ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್‌ ಕುಮಾರ್ 66ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದರು. 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು