ಭಾನುವಾರ, ಸೆಪ್ಟೆಂಬರ್ 19, 2021
29 °C

Tokyo Olympics: ಭಾರತಕ್ಕೆ ಮತ್ತೊಂದು ಪದಕ; ಕಂಚು ಗೆದ್ದ ಬಜರಂಗ್ ಪೂನಿಯಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಬಾ (ಜಪಾನ್): ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. 

ಶನಿವಾರ ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿಯ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಪೈಲ್ವಾನ ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ 8-0ರಿಂದ ಗೆಲುವು ದಾಖಲಿಸಿದರು. 

ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸುವ ಭರವಸೆಯಾಗಿದ್ದ ಬಜರಂಗ್ ಪೂನಿಯಾ, ಗಾಯದ ಸಮಸ್ಯೆಯಿಂದಾಗಿ ಹಿನ್ನಡೆ ಅನುಭವಿಸಿದರು. ಆದರೂ ದೇಶಕ್ಕಾಗಿ ಕಂಚಿನ ಪದಕ ಗೆಲ್ಲುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 

ಅಲ್ಲದೆ 2019ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಜಕಿಸ್ತಾನದ ಕುಸ್ತಿಪಟು ವಿರುದ್ಧ ಸೆಮಿಫೈನಲ್‌ನಲ್ಲಿ ಎದುರಾದ ಸೋಲಿಗೆ ಬಜರಂಗ್ ಸೇಡು ತೀರಿಸಿಕೊಂಡರು.

ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಭಾರತದ ಆರನೇ ಕುಸ್ತಿಪಟು...
ಬಜರಂಗ್ ಪೂನಿಯಾ, ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಆರನೇ ಕುಸ್ತಿಪಟು ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅಲ್ಲದೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುತ್ತಿರುವ ಎರಡನೇ ಕುಸ್ತಿಪಟು ಎಂದೆನಿಸಿದ್ದಾರೆ. ಈ ಮುನ್ನ ಪುರುಷರ 57 ಕೆ.ಜಿ. ವಿಭಾಗದಲ್ಲಿ ರವಿಕುಮಾರ್ ದಹಿಯಾ, ಬೆಳ್ಳಿ ಪದಕ ಜಯಿಸಿದ್ದರು. 

ಒಲಿಂಪಿಕ್ಸ್ ಕುಸ್ತಿಯಲ್ಲಿ ಪದಕ ಗೆದ್ದ ಭಾರತೀಯರು:
ಕೆ.ಡಿ. ಜಾಧವ್ (ಕಂಚು,1952),
ಸುನಿಲ್ ಕುಮಾರ್ (ಕಂಚು, 2008 ಮತ್ತು ಬೆಳ್ಳಿ 2012),
ಯೋಗೇಶ್ವರ್ ದತ್ (ಕಂಚು, 2012),
ಸಾಕ್ಷಿ ಮಲಿಕ್ (ಕಂಚು, 2016)
ರವಿಕುಮಾರ್ ದಹಿಯಾ (2021, ಬೆಳ್ಳಿ)
ಬಜರಂಗ್ ಪೂನಿಯಾ (2021, ಕಂಚು)

ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ...

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು