ಸೋಮವಾರ, ಸೆಪ್ಟೆಂಬರ್ 20, 2021
28 °C

Tokyo Olympics ಕುಸ್ತಿ: ದೀಪಕ್ ಪುನಿಯಾ, ರವಿ ದಹಿಯಾ ಸೆಮಿಫೈನಲ್‌ಗೆ ಲಗ್ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೋಕಿಯೊ: ಜಪಾನ್‌ನಲ್ಲಿ ಸಾಗುತ್ತಿರುವ ಟೋಕಿಯೊ ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಭಾರತದ ಭರವಸೆಯಾಗಿರುವ ದೀಪಕ್ ಪುನಿಯಾ ಹಾಗೂ ರವಿ ದಹಿಯಾ ತಮ್ಮ ತಮ್ಮ ವೈಯಕ್ತಿಕ ವಿಭಾಗಗಳಲ್ಲಿ ಸೆಮಿಫೈನಲ್‌ಗೆ ಪ್ರವೇಶಿಸಿದ್ದಾರೆ. 

ಪುರುಷರ 57 ಕೆ.ಜಿ ವಿಭಾಗದಲ್ಲಿ ರವಿ ದಹಿಯಾ ಮತ್ತು ಪುರುಷರ 86 ಕೆ.ಜಿ ವಿಭಾಗದಲ್ಲಿ ದೀಪಕ್ ಪೂನಿಯಾ ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿದರು. 

ದೀಪಕ್ ಪೂನಿಯಾ ಕ್ವಾರ್ಟರ್ ಫೈನಲ್ ಹೋರಾಟದಲ್ಲಿ ಚೀನಾದ ಶೂಶೆನ್ ಲಿನ್ ವಿರುದ್ಧ 6-3ರಲ್ಲಿ ರೋಚಕ ಗೆಲುವು ದಾಖಲಿಸಿದರು. ಜಿದ್ದಾಜಿದ್ದಿನಿಂದ ಸಾಗಿದ ಸಮಬಲದ ಹೋರಾಟದ ಕೊನೆಯ ಕ್ಷಣದಲ್ಲಿ ದೀಪಕ್ ಮೇಲುಗೈ ಸಾಧಿಸಿದರು. 

ಇದನ್ನೂ ಓದಿ: 

ಅತ್ತ  57 ಕೆ.ಜಿ ವಿಭಾಗದಲ್ಲಿ ರವಿ ದಹಿಯಾ, ಅಂತಿಮ ಎಂಟರ ಘಟ್ಟದ ಹೋರಾಟದಲ್ಲಿ ಬಲ್ಗೇರಿಯಾದ ಜಾರ್ಜಿ ವ್ಯಾಲೆಂಟಿನೋವ್ ವ್ಯಾಂಗೆಲೋವ್ ವಿರುದ್ದ 14-4ರ ಅಂತರದ ಅಧಿಕಾರಯುತ ಗೆಲುವು ದಾಖಲಿಸಿದರು. 

ಸೆಮಿಫೈನಲ್ ಕದನ...
ಭಾರತೀಯ ಕಾಲಮಾನ ಅಪರಾಹ್ನ 2.45ಕ್ಕೆ ಸರಿಯಾಗಿ ಸೆಮಿಫೈನಲ್ ಸ್ಪರ್ಧೆಗಳು ನಡೆಯಲಿವೆ. ದೀಪಕ್ ಪುನಿಯಾ ಅಮೆರಿಕದ ಡೇವಿಡ್ ಮೊರಿಸ್ ಸವಾಲನ್ನು ಎದುರಿಸಲಿದ್ದಾರೆ. ಅತ್ತ ರವಿ ದಹಿಯಾಗೆ ಅಂತಿಮ ನಾಲ್ಕರ ಘಟ್ಟದಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಸವಾಲು ಎದುರಾಗಲಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು