ಮಂಗಳವಾರ, ಸೆಪ್ಟೆಂಬರ್ 28, 2021
23 °C

Tokyo Olympics: ಸೆಮಿಫೈನಲ್‌ನಲ್ಲಿ ಬಜರಂಗ್‌ಗೆ ಸೋಲು, ಕಂಚಿನ ಆಸೆ ಜೀವಂತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಬಾ(ಜಪಾನ್): ಭಾರತದ ಭರವಸೆಯ ಕುಸ್ತಿಪಟು ಬಜರಂಗ್ ಪೂನಿಯಾ, ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ್ದಾರೆ. 

ಪುರುಷರ 65 ಕೆ.ಜಿ. ಫ್ರೀಸ್ಟೈಲ್ ವಿಭಾಗದ ಸೆಮಿಫೈನಲ್‌ ಪಂದ್ಯದಲ್ಲಿ ಬಜರಂಗ್, ಮೂರು ಬಾರಿಯ ವಿಶ್ವ ಚಾಂಪಿಯನ್ ಅಜರ್‌ ಬೈಜಾನ್‌ನ ಹಾಜಿ ಅಲಿಯೇವ್ ವಿರುದ್ಧ 5-12ರ ಅಂತರದಲ್ಲಿ ಸೋಲು ಅನುಭವಿಸಿದರು. 

ಇದನ್ನೂ ಓದಿ: 

ಹಾಗಿದ್ದರೂ ಬಜರಂಗ್ ಪೂನಿಯಾಗೆ ಮಗದೊಂದು ಅವಕಾಶವಿದ್ದು, ಕಂಚಿನ ಪದಕಕ್ಕಾಗಿ ಹೋರಾಡಲಿದ್ದಾರೆ. 

ಈ ಮೊದಲು ಬಜರಂಗ್ ಪೂನಿಯಾ, ಪ್ರೀ-ಕ್ವಾರ್ಟರ್‌ಫೈನಲ್‌ನಲ್ಲಿ ಕಿರ್ಗಿಸ್ತಾನದ ಎರ್ನಾಜರ್ ಅಕ್ಮಟಾಲೀವ್ ಮತ್ತು  ಕ್ವಾರ್ಟರ್‌ಫೈನಲ್‌ನಲ್ಲಿ ಇರಾನ್‌ನ ಮೊರ್ತೆಜಾ ಗಿಯಾಸಿ ವಿರುದ್ದ ಗೆಲುವು ದಾಖಲಿಸಿದರು. ಆದರೆ ಸೆಮಿಫೈನಲ್‌ನಲ್ಲಿ ಮಿಂಚುವಲ್ಲಿ ಭಾರತದ ಪೈಲ್ವಾನ ವಿಫಲರಾದರು. 

ಟೋಕಿಯೊ ಒಲಿಂಪಿಕ್ಸ್ ಕುಸ್ತಿ ಪುರುಷರ 57 ಕೆ.ಜಿ ವಿಭಾಗದಲ್ಲಿ ರವಿಕುಮಾರ್ ದಹಿಯಾ ಬೆಳ್ಳಿ ಪದಕ ಜಯಿಸಿದ್ದರು. ಈ ಮೂಲಕ ಒಲಿಂಪಿಕ್ಸ್‌ ಕುಸ್ತಿಯಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಎರಡನೇ ಕುಸ್ತಿಪಟುವೆಂಬ ಹೆಗ್ಗಳಿಕೆಗೆ ಪಾತ್ರರಾದರು. 2012ರಲ್ಲಿ ನಡೆದ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್‌ ಕುಮಾರ್ 66 ಕೆ.ಜಿ. ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು