ಶುಕ್ರವಾರ, ಮಾರ್ಚ್ 24, 2023
22 °C

Paralympics: ನೋಯ್ಡಾ ಜಿಲ್ಲಾಧಿಕಾರಿ ಸುಹಾಸ್ ಯತಿರಾಜ್ ಫೈನಲ್‌ಗೆ ಲಗ್ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೋಕಿಯೊ: ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್4 ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿರುವ ಭಾರತದ ಸುಹಾಸ್ ಎಲ್. ಯತಿರಾಜ್, ಚಿನ್ನದ ಪದಕ ಗೆಲ್ಲುವ ಗುರಿಯಿರಿಸಿದ್ದಾರೆ. 

ಪುರುಷರ ಬ್ಯಾಡ್ಮಿಂಟನ್ ಎಸ್‌ಎಲ್4 ವಿಭಾಗದಲ್ಲಿ ಶನಿವಾರ ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಯತಿರಾಜ್, ಎದುರಾಳಿ ಇಂಡೋನೇಷ್ಯಾದ ಫ್ರೆಡಿ ಸೆಟಿಯಾವನ್ ವಿರುದ್ಧ 21-9, 21-15ರ ಅಂತರದಲ್ಲಿ ಗೆಲುವು ದಾಖಲಿಸಿದರು. 

ಇದನ್ನೂ ಓದಿ: 

ನೋಯ್ಡಾದ ಜಿಲ್ಲಾಧಿಕಾರಿಯಾಗಿರುವ ಸುಹಾಸ್ ಯತಿರಾಜ್, ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಮೊದಲ ಐಎಎಸ್ ಅಧಿಕಾರಿ ಎನಿಸಿದ್ದಾರೆ. 

ಈ ಮೊದಲು ಬ್ಯಾಡ್ಮಿಂಟನ್ ಪುರುಷರ ಎಸ್‌ಎಲ್3 ವಿಭಾಗದಲ್ಲಿ ವಿಶ್ವ ನಂ.1 ಆಟಗಾರ ಭಾರತದ ಪ್ರಮೋದ್ ಭಗತ್ ಫೈನಲ್‌ಗೆ ಪ್ರವೇಶಿಸಿದ್ದಾರೆ.  

ಏತನ್ಮಧ್ಯೆ ಬ್ಯಾಡ್ಮಿಂಟನ್ ಪುರುಷರ ಎಸ್‌ಎಲ್3 ಸೆಮಿಫೈನಲ್ ಪಂದ್ಯದಲ್ಲಿ ಮನೋಜ್ ಸರ್ಕಾರ್ ಸೋಲು ಅನುಭವಿಸಿದ್ದಾರೆ. ಆದರೂ ಕಂಚಿನ ಪದಕಕ್ಕಾಗಿ ಸೆಣಸಲಿದ್ದಾರೆ. 

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು