ಮಂಗಳವಾರ, ಸೆಪ್ಟೆಂಬರ್ 21, 2021
21 °C

Paralympics: ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ ಗೆದ್ದ ಮನೋಜ್‌ ಸರ್ಕಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಟೋಕಿಯೊ: ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಬ್ಯಾಡ್ಮಿಂಟನ್‌ ಪುರುಷರ ಸಿಂಗಲ್ಸ್‌ ಸ್ಪರ್ಧೆಯಲ್ಲಿ ಭಾರತದ ಮನೋಜ್‌ ಸರ್ಕಾರ್‌ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

ಉತ್ತರಖಾಂಡ್‌ನವರಾದ ಸರ್ಕಾರ್‌ ಅವರು ಜಪಾನ್‌ನ ದೈಸುಕೆ ಫುಜಿಹಾರ ಎದುರು 2-0 ಸೆಟ್ ಅಂತರದ ಗೆಲುವು ಸಾಧಿಸಿದರು.

ಇದನ್ನೂ ಓದಿ: 

ಈ ಸ್ಪರ್ಧೆಯ ಫೈನಲ್‌ನಲ್ಲಿ ಭಾರತದ ಪ್ರಮೋದ್‌ ಭಗತ್‌ ಇಂಗ್ಲೆಂಡ್‌ನ ಡಿ.ಬೆಥೆಲ್‌ ಅವರನ್ನು 2-0 ಸೆಟ್‌ (21-14 21-17)  ಅಂತದಿಂದ ಮಣಿಸಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ.

ವಿಶ್ವದ ನಂ .1 ಆಟಗಾರ ಭಗತ್ ಪ್ಯಾರಾಲಿಂಪಿಕ್ಸ್‌ಗೆ ಪದಾರ್ಪಣೆ ಮಾಡಿದ ವರ್ಷವೇ ಚಿನ್ನದ ಪದಕ ಗೆಲ್ಲುವ ಮೂಲಕ ಬ್ಯಾಡ್ಮಿಂಟನ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು