ಟೋಕಿಯೊ: ಜಪಾನ್‌ನಲ್ಲಿ ಸಾಗುತ್ತಿರುವ ಪ್ಯಾರಾಲಿಂಪಿಕ್ಸ್‌ನ ಬ್ಯಾಡ್ಮಿಂಟನ್ ಪುರುಷರ ವೈಯಕ್ತಿಕ ವಿಭಾಗಗಳಲ್ಲಿ ಪ್ರಮೋದ್ ಭಗತ್ ಹಾಗೂ ಸುಹಾಸ್ ಯತಿರಾಜ್ ಬೆನ್ನಲ್ಲೇ ಕೃಷ್ಣಾ ನಗರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.
ಇದರೊಂದಿಗೆ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ವೈಯಕ್ತಿಕ ವಿಭಾಗಗಳಲ್ಲಿ ಭಾರತದ ಮೂವರು ಪಟುಗಳು ಫೈನಲ್‌ಗೆ ಪ್ರವೇಶಿಸುವ ಮೂಲಕ ಚಿನ್ನದ ಪದಕ ಗೆಲ್ಲುವ ಗುರಿಯನ್ನಿರಿಸಿದ್ದಾರೆ.
ಪುರುಷರ ಸಿಂಗಲ್ಸ್ ಎಸ್‌ಎಚ್6 ವಿಭಾಗದಲ್ಲಿ ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕೃಷ್ಣಾ ನಗರ್, ಎದುರಾಳಿ ಗ್ರೇಟ್ ಬ್ರಿಟನ್‌ನ ಕ್ರಿಸ್ಟನ್ ಕೂಂಬ್ಸ್ ವಿರುದ್ಧ 21-10, 21-11ರ ಅಂತರದಲ್ಲಿ ಗೆಲುವು ದಾಖಲಿಸಿದರು.
ಎರಡನೇ ಶ್ರೇಯಾಂಕಿತರಾಗಿರುವ ಕೃಷ್ಣಾ, ಕೇವಲ 26 ನಿಮಿಷಗಳಲ್ಲಿ ಪಂದ್ಯ ವಶಪಡಿಸಿಕೊಂಡರು.
ಈ ಮೊದಲು ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್3 ವಿಭಾಗದಲ್ಲಿ ಪ್ರಮೋದ್ ಭಗತ್ ಮತ್ತು ಎಸ್‌ಎಲ್4 ವಿಭಾಗದಲ್ಲಿ ಸುಹಾಸ್ ಎಲ್. ಯತಿರಾಜ್ ಸಹ ಫೈನಲ್‌ಗೆ ಪ್ರವೇಶಿಸಿದ್ದಾರೆ.
ಏತನ್ಮಧ್ಯೆ ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸಿರುವ ಮನೋಜ್ ಸರ್ಕಾರ್ ಮತ್ತು ತರುಣ್ ದಿಲ್ಲೋನ್ ಕಂಚಿನ ಪದಕಕ್ಕಾಗಿ ಸೆಣಸಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.