ಭಾನುವಾರ, ಅಕ್ಟೋಬರ್ 2, 2022
19 °C

ಕಾಮನ್‌ವೆಲ್ತ್ ಕ್ರೀಡಾಕೂಟ: ಪಾಕಿಸ್ತಾನದ ಇಬ್ಬರು ಬಾಕ್ಸರ್‌ಗಳು ನಾಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಕರಾಚಿ: ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ತೆರಳಿದ್ದ ಪಾಕಿಸ್ತಾನದ ಇಬ್ಬರು ಬಾಕ್ಸರ್‌ಗಳು ನಾಪತ್ತೆಯಾಗಿದ್ದಾರೆ. ರಾಷ್ಟ್ರೀಯ ಫೆಡರೇಷನ್‌ ಬುಧವಾರ ಈ ವಿಷಯ ತಿಳಿಸಿದೆ.

‘ಬಾಕ್ಸರ್‌ಗಳಾದ ಸುಲೇಮಾನ್‌ ಬಲೋಚ್ ಮತ್ತು ನಜೀರುಲ್ಲಾ ಅವರು ಕೂಟ ಮುಗಿದ ಬಳಿಕ ನಾಪತ್ತೆಯಾಗಿದ್ದಾರೆ‘ ಎಂದು ಪಾಕಿಸ್ತಾನ ಬಾಕ್ಸಿಂಗ್ ಫೆಡರೇಷನ್‌ (ಪಿಬಿಎಫ್‌) ಕಾರ್ಯದರ್ಶಿ ನಾಸಿರ್‌ ತಾಂಗ್ ಖಚಿತಪಡಿಸಿದ್ದಾರೆ.

‘ಬಾಕ್ಸರ್‌ಗಳ ಪಾಸ್‌ಪೋರ್ಟ್ ಸೇರಿದಂತೆ ಮತ್ತಿತರ ದಾಖಲೆಗಳು ಫೆಡರೇಷನ್‌ನ ಅಧಿಕಾರಿಗಳ ಬಳಿಯಿವೆ‘ ಎಂದು ನಾಸಿರ್‌ ಹೇಳಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್ ಸೋಮವಾರ ಮುಕ್ತಾಯವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು