ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಅಥ್ಲೆಟಿಕ್ಸ್‌| ಲಿಂಗತ್ವ ಅಲ್ಪಸಂಖ್ಯಾತರಿಗೆ ನಿರ್ಬಂಧ: ಸೆಬಾಸ್ಟಿಯನ್ ಕೋ

Last Updated 23 ಮಾರ್ಚ್ 2023, 23:23 IST
ಅಕ್ಷರ ಗಾತ್ರ

ಪ್ಯಾರಿಸ್‌: ಮಹಿಳೆಯರಿಗಾಗಿ ಇರುವ ಟ್ರ್ಯಾಕ್ ಮತ್ತು ಫೀಲ್ಡ್‌ ಅಥ್ಲೆಟಿಕ್ ಕೂಟಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತ (ಮಹಿಳೆ) ಅಥ್ಲೀಟ್‌ಗಳಿಗೆ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ ಎಂದು ವಿಶ್ವ ಅಥ್ಲೆಟಿಕ್ಸ್ ಅಧ್ಯಕ್ಷ ಸೆಬಾಸ್ಟಿಯನ್ ಕೋ ಗುರುವಾರ ತಿಳಿಸಿದ್ದಾರೆ.

ಪುರುಷ ಹಾರ್ಮೋನ್ ಪ್ರಮಾಣ ಹೆಚ್ಚು ಇರುವ ಅಥ್ಲೀಟ್‌ಗಳು ಮಾರ್ಚ್‌ 31ರಿಂದ ವಿಶ್ವ ರ‍್ಯಾಂಕಿಂಗ್ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ಇಲ್ಲ ಎಂದು ವಿಶ್ವ ಅಥ್ಲೆಟಿಕ್ಸ್ ಸಭೆಯ ಬಳಿಕ ಕೋ ಹೇಳಿದ್ದಾರೆ.

‘40 ರಾಷ್ಟ್ರೀಯ ಫೆಡರೇಷನ್‌ಗಳ ಪ್ರತಿನಿಧಿಗಳು, ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಮತ್ತು ಲಿಂಗತ್ವ ಅಲ್ಪಸಂಖ್ಯಾತರೊಂದಿಗೆ ಈ ಕುರಿತು ಸಮಾಲೋಚನೆ ನಡೆಸಲಾಗಿದೆ. ಅವರಲ್ಲಿ ಬಹುತೇಕರ ಅಭಿಪ್ರಾಯ ಲೈಂಗಿಕ ಅಲ್ಪಸಂಖ್ಯಾತರು ಮಹಿಳಾ ಕೂಟಗಳಲ್ಲಿ ಸ್ಪರ್ಧಿಸಬಾರದು ಎಂಬುದಾಗಿದೆ. ಕ್ರೀಡೆಯ ಹಿತಾಸಕ್ತಿಯ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ‘ ಎಂದು ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT