ಭಾನುವಾರ, ಮೇ 29, 2022
21 °C

ಮಹಿಳಾ ಏಷ್ಯಾಕ‍ಪ್‌ ಹಾಕಿ ಟೂರ್ನಿ: ಜಪಾನ್‌ಗೆ ಮಣಿದ ಭಾರತ

ಪಿಟಿಐ Updated:

ಅಕ್ಷರ ಗಾತ್ರ : | |

ಮಸ್ಕತ್‌: ಹಾಲಿ ಚಾಂಪಿಯನ್ ಭಾರತ ತಂಡವು ಮಹಿಳಾ ಏಷ್ಯಾಕ‍ಪ್‌ ಹಾಕಿ ಟೂರ್ನಿಯಲ್ಲಿ ಭಾನುವಾರ ಜಪಾನ್ ಎದುರು ಮಣಿಯಿತು.

‘ಎ’ ಗುಂಪಿನ ಪಂದ್ಯದಲ್ಲಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಜಪಾನ್‌ 2–0ಯಿಂದ ಭಾರತಕ್ಕೆ ಸೋಲುಣಿಸಿತು. ವಿಜೇತ ತಂಡದ ನಾಗಾ ಯೂರಿ (2ನೇ ನಿಮಿಷ) ಮತ್ತು ಸಾಕಿ ತನಕ (42ನೇ ನಿಮಿಷ) ಕಾಲ್ಚಳಕ ತೋರಿದರು.

ಭಾರತ ತಂಡವು ಮುಂದಿನ ಪಂದ್ಯದಲ್ಲಿ ಸೋಮವಾರ ಸಿಂಗಪುರ ತಂಡವನ್ನು ಎದುರಿಸಲಿದೆ. ಮೊದಲ ಪಂದ್ಯದಲ್ಲಿ ಭಾರತವು 9–0ಯಿಂದ ಮಲೇಷ್ಯಾ ತಂಡವನ್ನು ಪರಾಭವಗೊಳಿಸಿತ್ತು. ಜಪಾನ್ ತಂಡವು ಮೊದಲ ಪಂದ್ಯದಲ್ಲಿ ಸಿಂಗಪುರ ತಂಡವನ್ನು ಸೋಲಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು