ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಅಥ್ಲೆಟಿಕ್ಸ್‌ನಲ್ಲಿ ಕಂಚಿನ ಪದಕ: ಪ್ರಿಯಾ ಮೋಹನ್‌ಗೆ ಅಭಿನಂದನೆ

Last Updated 3 ಸೆಪ್ಟೆಂಬರ್ 2021, 21:26 IST
ಅಕ್ಷರ ಗಾತ್ರ

ಬೆಂಗಳೂರು: ಕೀನ್ಯಾದ ನೈರೋಬಿಯಲ್ಲಿ ಈಚೆಗೆ ನಡೆದ 20 ವರ್ಷದೊಳಗಿನವರ ವಿಶ್ವ ಅಥ್ಲೆಟಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಸ್ಪ್ರಿಂಟರ್‌ ಪ್ರಿಯಾ ಮೋಹನ್ ಅವರನ್ನು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ಅಭಿನಂದಿಸಿದರು.

ಉದ್ಯಮಿ ದಯಾನಂದ ಪೈ ಅವರು ಪ್ರಿಯಾ ಅವರಿಗೆ ₹ 5 ಲಕ್ಷ ಮೊತ್ತದ ಚೆಕ್ ನೀಡಿ ಪುರಸ್ಕರಿಸಿದರು. ಕ್ರೀಡಾಕೂಟದಲ್ಲಿ 4x400 ಮೀಟರ್ಸ್‌ ಮಿಶ್ರ ರಿಲೆಯಲ್ಲಿ ಕಂಚಿನ ಪದಕ ಗೆದ್ದ ಭಾರತ ತಂಡದಲ್ಲಿ ಪ್ರಿಯಾ ಇದ್ದರು. 400 ಮೀಟರ್ಸ್‌ ಓಟದ ಸ್ಪರ್ಧೆಯಲ್ಲೂ ಪಾಲ್ಗೊಂಡಿದ್ದರು.

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಸಂಬಂಧಿಸಿ ಬೆಂಗಳೂರು ನಗರ ವಿಶ್ವವಿದ್ಯಾಲಯವು ಮೌಂಟ್ ಕಾರ್ಮೆಲ್ ಕಾಲೇಜಿನ ಸಹಯೋಗದಲ್ಲಿ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿ ಕೊಂಡಿದ್ದ ರಾಷ್ಟ್ರೀಯ ವಿಚಾರಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಪ್ರಿಯಾ ಅವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT