ನವದೆಹಲಿ (ಪಿಟಿಐ): ಭಾರತದ ನಿಖತ್ ಜರೀನ್ ಮತ್ತು ಲವ್ಲಿನಾ ಬೊರ್ಗೊಹೈನ್ ಅವರು ವಿಶ್ವ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಜಯಿಸಿದರು.
ಕೆ.ಡಿ.ಜಾಧವ್ ಒಳಾಂಗಣ ಕ್ರೀಡಾಂಗಣದಲ್ಲಿ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರ ಸಮ್ಮುಖದಲ್ಲಿ ಭಾನುವಾರ ನಡೆದ 52 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ನಿಖತ್ 5–0ಯಲ್ಲಿ ವಿಯೆಟ್ನಾಂನ ಗುಯೆನ್ ಥಿ ಟಾಮ್ ವಿರುದ್ಧ ಗೆದ್ದರು.
ಕಳೆದ ವರ್ಷವೂ ಚಾಂಪಿಯನ್ ಆಗಿದ್ದ ನಿಖತ್ ಅವರು ಮೇರಿ ಕೋಮ್ ಬಳಿಕ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಸತತ ಎರಡು ಕಿರೀಟ ಗೆದ್ದ ಭಾರತದ ಬಾಕ್ಸರ್ ಎಂಬ ಗೌರವಕ್ಕೆ ಪಾತ್ರರಾದರು. ನಿಖತ್ ಕಳೆದ ಸಲವೂ 52 ಕೆ.ಜಿ. ವಿಭಾಗದಲ್ಲಿ ಸ್ಪರ್ಧಿಸಿದ್ದರು.
75 ಕೆ.ಜಿ. ವಿಭಾಗದಲ್ಲಿ ಕಣಕ್ಕಿಳಿದ ಲವ್ಲಿನಾ 5–2 ರಲ್ಲಿ ಆಸ್ಟ್ರೇಲಿಯಾದ ಕೈಟ್ಲಿನ್ ಪಾರ್ಕರ್ ಅವರನ್ನು ಮಣಿಸಿದರು. ಈ ಹಿಂದೆ ಎರಡು ಸಲ ಕಂಚು ಜಯಿಸಿದ್ದ ಲವ್ಲಿನಾ, ಚೊಚ್ಚಲ ಚಿನ್ನದ ಪದಕಕ್ಕೆ ಮುತ್ತಿಕ್ಕಿ ಸಂಭ್ರಮಿಸಿದರು.
ಈ ಚಾಂಪಿಯನ್‌ಷಿಪ್‌ನಲ್ಲಿ ಭಾರತ ಒಟ್ಟು ನಾಲ್ಕು ಚಿನ್ನ ಗೆದ್ದ ಸಾಧನೆ ಮಾಡಿದೆ. ನೀತು ಗಂಗಾಸ್ ಮತ್ತು ಸ್ವೀಟಿ ಬೂರಾ ಅವರು ಶನಿವಾರ ಕ್ರಮವಾಗಿ 48 ಕೆ.ಜಿ ಹಾಗೂ 81 ಕೆ.ಜಿ. ವಿಭಾಗಗಳಲ್ಲಿ ಚಾಂಪಿಯನ್ ಆಗಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.