ಗುರುವಾರ , ಮೇ 26, 2022
24 °C

ವಿಶ್ವ ಟಿಟಿ ಕಂಟೆಂಡರ್‌: ಅನರ್ಘ್ಯಾಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶ್ರೇಷ್ಠ ಸಾಮರ್ಥ್ಯ ತೋರಿದ ಕರ್ನಾಟಕದ ಅನರ್ಘ್ಯಾ ಮಂಜುನಾಥ್ ಅವರು ವಿಶ್ವ ಟೇಬಲ್ ಟೆನಿಸ್ ಕಂಟೆಂಡರ್ ಟೂರ್ನಿಯಲ್ಲಿ ಪ್ರಶಸ್ತಿಗೆ ಮುತ್ತಿಟ್ಟಿದ್ದಾರೆ.

ಸರ್ಬಿಯಾದ ಬೆಲ್‌ಗ್ರೇಡ್‌ನಲ್ಲಿ ಮಂಗಳವಾರ ರಾತ್ರಿ ನಡೆದ 17 ವರ್ಷದೊಳಗಿನವರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಅವರು 11-6, 7-11,11-4,8-11,11-6ರಿಂದ ಹಂಗರಿಯ ಟೊಲ್ಗೆಸ್ ದೊರೊತಿ ಅವರನ್ನು ಪರಾಭವಗೊಳಿಸಿದರು.

ನಾಲ್ಕರ ಘಟ್ಟದಲ್ಲಿ ಸ್ವಿಟ್ಜರ್ಲೆಂಡ್‌ನ ಬ್ಯಾಸನ್‌ ನೊಮಿನ್ ಅವರನ್ನು ಅನರ್ಘ್ಯಾ 11-4,11-7,12-10 ಮಣಿಸಿದ್ದರು. ಇದೇ ಟೂರ್ನಿಯಲ್ಲಿ ಸ್ಪರ್ಧಿಸಿದ್ದ ಕರ್ನಾಟಕದ ಕರುಣಾ ಗಜೇಂದ್ರನ್‌ ಕ್ವಾರ್ಟರ್‌ಫೈನಲ್‌ನಲ್ಲಿ ಅನರ್ಘ್ಯಾ ವಿರುದ್ಧ ಸೋತಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು