ಕುಸ್ತಿ ಟೂರ್ನಿ: ಚಿನ್ನ ಗೆದ್ದು ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ ವಿನೇಶಾ

ರೋಮ್: ಎರಡು ವಾರಗಳ ಅಂತರದಲ್ಲಿ ಎರಡನೇ ಚಿನ್ನದ ಪದಕ ಮುಡಿಗೇರಿಸಿಕೊಂಡ ಭಾರತದ ವಿನೇಶಾ ಪೋಗಟ್, ವಿಶ್ವ ಕ್ರಮಾಂಕದಲ್ಲಿ 53 ಕೆಜಿ ವಿಭಾಗದಲ್ಲಿ ಅಗ್ರಸ್ಥಾನಕ್ಕೆ ಮರಳಿದರು. ಇಲ್ಲಿ ನಡೆಯುತ್ತಿರುವ ಮಾಟಿಯೊ ಪೆಲಿಕೋನ್ ರ‍್ಯಾಂಕಿಂಗ್ ಸಿರೀಸ್ ಕುಸ್ತಿ ಟೂರ್ನಿಯಲ್ಲಿ ಅವರು ಮೊದಲ ಸ್ಥಾನ ಗಳಿಸಿದರು.
ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿರುವ ಭಾರತದ ಏಕೈಕ ಮಹಿಳಾ ಕುಸ್ತಿಪಟು ಎನಿಸಿಕೊಂಡಿರುವ ವಿನೇಶಾ, 53 ಕೆಜಿ ವಿಭಾಗದ ಫೈನಲ್ ಬೌಟ್‌ನಲ್ಲಿ 4–0ರಿಂದ ಕೆನಡಾದ ಮೇರಿ ಹೆಲನ್ ವಿಕ್ಕರ್ ಅವರನ್ನು ಮಣಿಸಿದರು.
ಕಳೆದ ವಾರ ಉಕ್ರೇನ್ ಕೀವ್‌ನಲ್ಲಿ ನಡೆದ ಟೂರ್ನಿಯಲ್ಲೂ ಅವರಿಗೆ ಚಿನ್ನದ ಪದಕ ಒಲಿದಿತ್ತು.
ರೋಮ್ ಟೂರ್ನಿಗೂ ಮೊದಲು ವಿನೇಶಾ ಅವರು ವಿಶ್ವ ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿದ್ದರು. ಇಲ್ಲಿ 14 ಪಾಯಿಂಟ್ಸ್ ಕಲೆಹಾಕುವ ಮೂಲಕ ಅಗ್ರಸ್ಥಾನಕ್ಕೆ ಮರಳಿದರು. ಕೆನಡಾದ ಮೇರಿ ಅವರು ಎರಡನೇ ಸ್ಥಾನದಲ್ಲಿದ್ದಾರೆ.
ವಿನೇಶಾ ಅವರು ಈ ಟೂರ್ನಿಯಲ್ಲಿ ಒಂದೂ ಪಾಯಿಂಟ್ ಅನ್ನು ಎದುರಾಳಿಗೆ ಬಿಟ್ಟುಕೊಟ್ಟಿಲ್ಲ. ಇಲ್ಲಿ ಚಿನ್ನ ಗೆಲ್ಲುವ ಮೂಲಕ ಒಲಿಂಪಿಕ್ಸ್‌ಗೂ ಭರ್ಜರಿಯಾಗಿ ಸಿದ್ಧತೆ ನಡೆಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.