ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ ಆರೋಪ: ಕುಸ್ತಿಪಟುಗಳಿಂದ ಮುಂದುವರಿದ ಪ್ರತಿಭಟನೆ

Last Updated 19 ಜನವರಿ 2023, 9:52 IST
ಅಕ್ಷರ ಗಾತ್ರ

ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ವಜಾಕ್ಕೆ ಆಗ್ರಹಿಸಿ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಗುರುವಾರವೂ ಮುಂದುವರಿದಿದೆ.

ಟೋಕಿಯೊ ಒಲಿಂಪಿಕ್ ಪದಕ ವಿಜೇತ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್, ವಿಶ್ವ ಚಾಂಪಿಯನ್‌ಷಿಪ್ ಪದಕ ವಿಜೇತ ಕುಸ್ತಿಪಟು ವಿನೇಶಾ ಪೋಗಟ್ ಸೇರಿದಂತೆ ಅನೇಕ ಹಿರಿಯ ಹಾಗೂ ಕಿರಿಯ ಕುಸಿಪಟುಗಳು ಜಂತರ್ ಮಂಥರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಬಿಜೆಪಿ ಸಂಸದರೂ ಆಗಿರುವ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಅವರ ಮೇಲೆ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪವೂ ಇದೆ. ಆದರೆ ಈ ಎಲ್ಲ ಆರೋಪಗಳನ್ನು ಸಿಂಗ್ ನಿರಾಕರಿಸಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ (ಎಸ್‌ಎಐ) ಕುಸ್ತಿಪಟುಗಳು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT