ಗುರುವಾರ , ಜೂನ್ 30, 2022
22 °C

ಅಲ್ಕರಾಜ್‌ ಕಿರಿಯ ಎಟಿಪಿ 500 ವಿಜೇತ

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ರಿಯೊ ಡಿ ಜನೈರೊ: ಸ್ಪೇನ್‌ನ 18 ವರ್ಷದ ಕಾರ್ಲೋಸ್ ಅಲ್ಕರಾಜ್ ಅವರು ಎಟಿಪಿ 500 ಟೆನಿಸ್‌ ಟೂರ್ನಿಯ ಪ್ರಶಸ್ತಿ ಗೆದ್ದ ಅತಿ ಕಿರಿಯ ಆಟಗಾರ ಎನಿಸಿಕೊಂಡರು. ಎರಡು ವರ್ಷಗಳ ಹಿಂದೆ ಟೂರ್‌ ಮಟ್ಟದ ಮೊದಲ ಪ್ರಶಸ್ತಿ ಗೆದ್ದು ಸಂಭ್ರಮಿಸಿದ್ದ ಅವರು ಭಾನುವಾರ ರಾತ್ರಿ ನಡೆದ ರಿಯೊ ಓಪನ್ ಟೂರ್ನಿಯ ಫೈನಲ್‌ನಲ್ಲಿ ಅರ್ಜೆಂಟೀನಾದ ಡೀಗೊ ಸ್ವಾರ್ಟ್ಸ್‌ಮನ್‌ ಎದುರು 6-4, 6-2ರಲ್ಲಿ ಜಯ ಗಳಿಸಿದರು.  

ವೇಳಾಪಟ್ಟಿಯಲ್ಲಿ ಆದ ಬದಲಾವಣೆಯಿಂದಾಗಿ ಕ್ವಾರ್ಟರ್ ಫೈನಲ್‌ ಮತ್ತು ಸೆಮಿಫೈನಲ್‌ ಪಂದ್ಯಗಳೆರಡನ್ನೂ ಅಲ್ಕರಾಜ್ ಶನಿವಾರ ಒಂದೇ ದಿನ ಆಡಬೇಕಾಗಿತ್ತು. ವಿಶ್ವ ಕ್ರಮಾಂಕದಲ್ಲಿ ಆರನೇ ಸ್ಥಾನದಲ್ಲಿರುವ ಮಟಿಯೊ ಬೆರೆಟಿನಿ ಮತ್ತು ಮತ್ತೊಬ್ಬ ಪ್ರಮುಖ ಆಟಗಾರ ಫ್ಯಾಬಿಯೊ ಫಾಗ್ನಿನಿ ಅವರನ್ನು ಅಲ್ಕರಾಜ್ ಸೋಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು