ಪ್ಯಾರಿಸ್: ಸ್ಪೇನ್‌ನ ಕಾರ್ಲೊಸ್ ಅಲ್ಕರಾಜ್ ಅವರು ಎಟಿಪಿ ಟೆನಿಸ್ ರ್‍ಯಾಂಕಿಂಗ್‌ನಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ್ಧಾರೆ.
ಮೊದಲ ಸ್ಥಾನದಲ್ಲಿದ್ದ ಸರ್ಬಿಯದ ನೊವಾಕ್ ಜೊಕೊವಿಚ್ ಎರಡನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಇಂಡಿಯನ್ ವೆಲ್ಸ್‌ನಲ್ಲಿ ನಡೆದ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿದ್ದು, ಅಲ್ಕರಾಜ್ ಅಗ್ರಸ್ಥಾನಕ್ಕೇರಲು ಕಾರಣ. ಭಾನುವಾರ ನಡೆದ ಫೈನಲ್‌ನಲ್ಲಿ ಅವರು ರಷ್ಯಾದ ಡೇನಿಯಲ್ ಮೆಡ್ವೆಡೆವ್ ವಿರುದ್ಧ ಜಯಿಸಿದ್ದರು. ಜೊಕೊವಿಚ್ ಈ ಟೂರ್ನಿಯಲ್ಲಿ ಆಡಿರಲಿಲ್ಲ.
ಮಹಿಳೆಯರ ವಿಭಾಗದಲ್ಲಿ ಪೋಲೆಂಡ್‌ನ ಇಗಾ ಶ್ವಾಂಟೆಕ್ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.