ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್‌ ಆಟಗಾರ ನೊವಾಕ್ ಜೊಕೊವಿಕ್ ವೀಸಾವನ್ನು ಮತ್ತೆ ರದ್ದುಗೊಳಿಸಿದ ಆಸ್ಟ್ರೇಲಿಯಾ

Last Updated 14 ಜನವರಿ 2022, 9:19 IST
ಅಕ್ಷರ ಗಾತ್ರ

ಮೆಲ್ಬರ್ನ್‌:ಜಗತ್ತಿನ ನಂ. 1 ಟೆನಿಸ್‌ ಆಟಗಾರ ನೊವಾಕ್ ಜೊಕೊವಿಕ್ ಅವರ ವೀಸಾವನ್ನು ಆಸ್ಟ್ರೇಲಿಯಾ ಶುಕ್ರವಾರ ಮತ್ತೊಮ್ಮೆ ರದ್ದುಗೊಳಿಸಿದೆ.

ಕೋವಿಡ್‌ ಲಸಿಕೆಯನ್ನು ಹಾಕಿಸಿಕೊಂಡಿರುವ ಪುರಾವೆಗಳನ್ನು ನೀಡದ ಹಿನ್ನೆಲೆಯಲ್ಲಿ ಜೊಕೊವಿಕ್‌ ಅವರ ವೀಸಾವನ್ನು ಎರಡನೇ ಬಾರಿಗೆ ರದ್ದುಗೊಳಿಸಿ ಆಸ್ಟ್ರೇಲಿಯಾ ಸರ್ಕಾರ ಆದೇಶ ಹೊರಡಿಸಿದೆ.

ಲಸಿಕೆ ಪಡೆಯದ ಜೊಕೊವಿಕ್‌ ಅವರು ಸಮುದಾಯಕ್ಕೆ ಅಪಾಯವನ್ನು ತಂದೊಡ್ಡಬಹುದು ಎಂಬ ಕಾರಣವನ್ನು ಆಸ್ಟ್ರೇಲಿಯಾ ಸರ್ಕಾರ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಆಸ್ಟ್ರೇಲಿಯಾ ಸರ್ಕಾರದ ವಿರುದ್ಧ ನೊವಾಕ್ ಜೊಕೊವಿಚ್ ಅವರು ಈ ಮೊದಲು ನ್ಯಾಯಾಲಯದಲ್ಲಿ ಜಯ ಸಾಧಿಸಿದ್ದರು. ಆಸ್ಟ್ರೇಲಿಯಾದಲ್ಲಿ ಉಳಿದುಕೊಳ್ಳಲು ಮತ್ತು ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಆಡಲು ಅವರಿಗೆ ಅವಕಾಶ ನೀಡುವಂತೆ ನ್ಯಾಯಾಧೀಶರು ಸೂಚಿಸಿದ್ದರು.

ಆಸ್ಟ್ರೇಲಿಯನ್ ಓಪನ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಕೋವಿಡ್‌ ಲಸಿಕೆ ಪಡೆದಿರುವುದು ಕಡ್ಡಾಯ. ಆದರೆ, ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕಿದ್ದ ಜೊಕೊವಿಚ್‌ ವೈದ್ಯಕೀಯ ವಿನಾಯಿತಿ ಪಡೆದುಕೊಂಡು ಬಂದಿದ್ದರು. ಅವರನ್ನು ವಶಕ್ಕೆ ಪಡೆದುಕೊಂಡಿದ್ದ ಅಧಿಕಾರಿಗಳು ವೀಸಾ ತಡೆ ಹಿಡಿದು ಹೋಟೆಲ್‌ನಲ್ಲಿ ಇರಿಸಿದ್ದರು. ಇದರ ವಿರುದ್ಧ ಜೊಕೊವಿಚ್ ನ್ಯಾಯಾಲಯದ ಮೆಟ್ಟಿಲೇರಿದ್ದರು.

ನ್ಯಾಯಾಲಯದ ಆದೇಶದ ಹೊರತಾಗಿಯೂ ಆಸ್ಟ್ರೇಲಿಯಾ ಸರ್ಕಾರವು ಜೊಕೊವಿಕ್‌ ಅವರ ವೀಸಾವನ್ನು ಎರಡನೇ ಬಾರಿಗೆ ರದ್ದುಗೊಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT