ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Australian Open 2021: ಸೆರೆನಾ ಮಣಿಸಿದ ಒಸಾಕ ಫೈನಲ್‌ಗೆ ಲಗ್ಗೆ

Last Updated 18 ಫೆಬ್ರುವರಿ 2021, 5:48 IST
ಅಕ್ಷರ ಗಾತ್ರ

ಮೆಲ್ಬರ್ನ್: ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ 2021 ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ 23 ಬಾರಿಯ ಚಾಂಪಿಯನ್ ಅಮೆರಿಕದ ಸೆರೆನಾ ವಿಲಿಯಮ್ಸ್ ಮಣಿಸಿರುವ ಜಪಾನ್‌ನ ಯುವ ತಾರೆ ನವೊಮಿ ಒಸಾಕ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಗುರುವಾರ ನಡೆದ ಮಹಿಳಾ ಸಿಂಗಲ್ಸ್ ವಿಭಾಗದ ಸೆಮಿಫೈನಲ್ ಮುಖಾಮುಖಿಯಲ್ಲಿ ಮೂರು ಬಾರಿಯ ಗ್ರ್ಯಾನ್ ಸ್ಲಾಮ್ ಚಾಂಪಿಯನ್ ಒಸಾಕ ಅವರು 6-3, 6-4ರ ನೇರ ಸೆಟ್ ಅಂತರದಲ್ಲಿ ಸೆರೆನಾರನ್ನು ಸೋಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟರು.

23ರ ಹರೆಯದ ಒಸಾಕ, 2019ನೇ ಸಾಲಿನಲ್ಲಿ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್ ಸ್ಲಾಮ್ ಕಿರೀಟ ಗೆದ್ದಿದ್ದರು. ಇದರೊಂದಿಗೆ ಎರಡನೇ ಬಾರಿಗೆ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.

ಅತ್ತ 39ರ ಹರೆಯದ ಅಮೆರಿಕದ ಹಿರಿಯ ಆಟಗಾರ್ತಿ ಸೆರೆನಾ ವಿಲಿಯಮ್ಸ್ ಅವರ 24ನೇ ಗ್ರ್ಯಾನ್ ಸ್ಲಾಮ್ ಪ್ರಶಸ್ತಿ ಕನಸು ಭಗ್ನಗೊಂಡಿದೆ. ಇದಕ್ಕಾಗಿ ಮತ್ತಷ್ಟು ಸಮಯ ಕಾಯಬೇಕಿದೆ.

ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಆಸ್ಟ್ರೇಲಿಯಾದ ಮಾಜಿ ಆಟಗಾರ್ತಿ ಮಾರ್ಗರೇಟ್ ಕೋರ್ಟ್ ದಾಖಲೆಯ 24 ಗ್ರ್ಯಾನ್ ಸ್ಲಾಮ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಈ ದಾಖಲೆಯನ್ನು ಸರಿಗಟ್ಟುವ ಅವಕಾಶದಿಂದ ಸೆರೆನಾ ವಂಚಿತರಾದರು.

ಒಟ್ಟು ಏಳು ಬಾರಿ ಆಸ್ಟ್ರೇಲಿಯನ್ ಓಪನ್ ಗೆದ್ದಿರುವ ಸೆರೆನಾ, ಕೊನೆಯದಾಗಿ 2017ರಲ್ಲಿ ಮೆಲ್ಬರ್ನ್ ಪಾರ್ಕ್‌ನಲ್ಲಿ ಪ್ರಶಸ್ತಿಮುಡಿಗೇರಿಸಿದ್ದರು.



ಟೂರ್ನಿಯಲ್ಲಿ ಮೂರನೇ ಶ್ರೇಯಾಂಕಿತೆಯಾಗಿರುವ ಒಸಾಕ, 10ನೇ ಶ್ರೇಯಾಂಕಿತೆ ಸೆರೆನಾ ವಿರುದ್ಧ ಪಂದ್ಯುದುದ್ಧಕ್ಕೂ ಅಧಿಪತ್ಯ ಸ್ಥಾಪಿಸಿದರು. ಆ ಮೂಲಕ ಸ್ಮರಣೀಯ ಗೆಲುವನ್ನು ಸಂಪಾದಿಸಿದರು.

2018ರ ವಿವಾದಿತ ಅಮೆರಿಕ ಓಪನ್ ಫೈನಲ್‌ನಲ್ಲಿ ಸೆರೆನಾ ವಿಲಿಯಮ್ಸ್ ಅವರನ್ನೇ ಮಣಿಸಿದ್ದ ನವೊಮಿ ಒಸಾಕ ಚೊಚ್ಚಲ ಗ್ರ್ಯಾನ್ ಸ್ಲಾಮ್ ಕಿರೀಟಕ್ಕೆ ಮುತ್ತಿಕ್ಕಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT