ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೇವಿಸ್ ಕಪ್‌: ಭದ್ರತಾ ವ್ಯವಸ್ಥೆ ಮರುಪರಿಶೀಲನೆಗೆ ಮನವಿ

Last Updated 12 ಆಗಸ್ಟ್ 2019, 18:25 IST
ಅಕ್ಷರ ಗಾತ್ರ

ನವದೆಹಲಿ: ಪಾಕಿಸ್ತಾನ ವಿರುದ್ಧದ ಡೇವಿಸ್‌ ಕಪ್‌ ಪಂದ್ಯವನ್ನುತಟಸ್ಥ ಸ್ಥಳದಲ್ಲಿ ನಡೆಸುವಂತೆ ಈ ಹಿಂದೆ ಮಾಡಿದ್ದ ಮನವಿಯಿಂದ ಹಿಂದೆ ಸರಿಯಲು ಆಖಿಲ ಭಾರತ ಟೆನಿಸ್‌ ಸಂಸ್ಥೆ (ಎಐಟಿಎ) ನಿರ್ಧರಿಸಿದೆ. ಆದರೆ, ರಾಜತಾಂತ್ರಿಕ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ, ಪಂದ್ಯ ನಡೆಯುವ ಇಸ್ಲಾಮಾಬಾದ್‌ನಲ್ಲಿ ಭದ್ರತಾ ವ್ಯವಸ್ಥೆಯ ಪರಿಶೀಲನೆಯನ್ನು ಮತ್ತೊಮ್ಮೆ ನಡೆಸುವಂತೆ ಆಂತರರಾಷ್ಟ್ರೀಯ ಟೆನಿಸ್‌ ಫೆಡರೇಷನ್‌ಗೆ (ಐಟಿಎಫ್‌) ಸೋಮವಾರ ವಿನಂತಿ ಮಾಡಿದೆ.

ಏಷ್ಯಾ ಒಷಾನಿಯಾ ವಲಯದ ಒಂದನೇ ಗುಂಪಿನ ಈ ಪಂದ್ಯ ಸೆಪ್ಟೆಂಬರ್‌ 14 ಮತ್ತು 15ರಂದು ನಿಗದಿ ಯಾಗಿದೆ. ಆದರೆ ಉಭಯ ರಾಷ್ಟ್ರಗಳ ಮಧ್ಯೆ ಬಾಂಧವ್ಯ ಇತ್ತೀಚಿನ ದಿನಗಳಲ್ಲಿ ಮೊದಲಿಗಿಂತ ಸೂಕ್ಷ್ಮವಾಗಿರುವುದರಿಂದ ಪಂದ್ಯ ನಡೆಯವುದು ಅನಿಶ್ಚಿತ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಹಿಂತೆಗೆದ ಮೇಲೆ ರಾಜಕೀಯ ಬಿಕ್ಕಟ್ಟು ತಲೆದೋರುವ ಮೊದಲು ಸುರಕ್ಷತಾ ವ್ಯವಸ್ಥೆಯನ್ನು ಪರಿಶೀಲಿಸಲಾಗಿತ್ತು. ಈಗ ಪರಿಸ್ಥಿತಿ ಬದಲಾಗಿದ್ದು, ಮತ್ತೊಮ್ಮೆ ತಪಾಸಣೆ ನಡೆಸುವುದು ಸೂಕ್ತ ಎಂದು ಎಐಟಿಎ ಕಾರ್ಯದರ್ಶಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT