ಭಾನುವಾರ, ಆಗಸ್ಟ್ 1, 2021
21 °C

ವಿಂಬಲ್ಡನ್‌ನಿಂದ ಹಿಂದೆ ಸರಿದ ಹಲೆಪ್‌

ಎಎಫ್‍ಪಿ Updated:

ಅಕ್ಷರ ಗಾತ್ರ : | |

 ಸಿಮೊನಾ ಹಲೆಪ್‌

ಲಂಡನ್‌: ಮೀನಖಂಡದ ಗಾಯದಿಂದಾಗಿ ವಿಂಬಲ್ಡನ್‌ ಟೆನಿಸ್‌ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ರುಮೇನಿಯಾದ ಆಟಗಾರ್ತಿ ಸಿಮೊನಾ ಹಲೆಪ್‌ ಶುಕ್ರವಾರ ತಿಳಿಸಿದ್ದಾರೆ. ಅವರು ಈ ಕೂಟದ ಮಹಿಳಾ ಸಿಂಗಲ್ಸ್‌ ಹಾಲಿ ಚಾಂಪಿಯನ್‌ ಆಗಿದ್ದಾರೆ.

29 ವರ್ಷದ ಹಲೆಪ್‌, ಮೇ ತಿಂಗಳ ಮಧ್ಯದಲ್ಲಿ ಇಟಾಲಿಯನ್‌ ಓಪನ್‌ ಟೂರ್ನಿಯ ಎರಡನೇ ಸುತ್ತಿನ ಪಂದ್ಯದಿಂದ ಹಿಂದೆ ಸರಿದಿದ್ದರು. ನಂತರ ಅವರು ಗಾಯದ ಸಮಸ್ಯೆಯಿಂದ ಕ್ಷಮತೆ ಕಾಪಾಡಿಕೊಳ್ಳಲು ಪರದಾಡುತ್ತಿದ್ದಾರೆ.

‘ಮೀನ ಖಂಡದ ಗಾಯದಿಂದ ಪೂರ್ಣ ಚೇತರಿಸಿಕೊಂಡಿಲ್ಲ. ವಿಂಬಲ್ಡನ್‌ನಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಅತೀವ ಬೇಸರದಿಂದ ಪ್ರಕಟಿಸುತ್ತಿದ್ದೇನೆ’ ಎಂದಿದ್ದಾರೆ ಹಲೆಪ್‌.

ಇದನ್ನೂ ಓದಿ: ವಿಂಬಲ್ಡನ್, ಒಲಿಂಪಿಕ್ಸ್ ಕ್ರೀಡಾಕೂಟದಿಂದ ಹಿಂದೆ ಸರಿದ ನಡಾಲ್ | Prajavani

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು