ಶುಕ್ರವಾರ, ಜುಲೈ 1, 2022
22 °C

ಅಂಗಣಕ್ಕೆ ನೊವಾಕ್ ಜೊಕೊವಿಚ್‌: ಅದ್ದೂರಿ ಸ್ವಾಗತ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ದುಬೈ: ಕೋವಿಡ್‌ ಲಸಿಕೆ ತೆಗೆದುಕೊಳ್ಳದ ಕಾರಣ ಆಸ್ಟ್ರೇಲಿಯಾ ಓಪನ್ ಟೂರ್ನಿಯಲ್ಲಿ ಆಡುವುದರಿಂದ ವಂಚಿತರಾಗಿದ್ದ ವಿಶ್ವದ ಅಗ್ರ ಕ್ರಮಾಂಕದ ಟೆನಿಸ್ ಆಟಗಾರ ನೊವಾಕ್ ಜೊಕೊವಿಚ್‌ ಅವರು ಇಲ್ಲಿ ನಡೆದ ಟೂರ್ನಿಯಲ್ಲಿ ಶುಭಾರಂಭ ಮಾಡಿದರು.

ಅಭಿಮಾನಿಗಳಿಂದ ಅದ್ದೂರಿ ಸ್ವಾಗತ ಸ್ವೀಕರಿಸಿದ ಸರ್ಬಿಯಾ ಆಟಗಾರ, ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯದಲ್ಲಿ 6-3, 6-3ರಿಂದ ಇಟಲಿಯ ಲೊರೆಂಜೊ ಮುಸೆಟ್ಟಿ ಅವರನ್ನು ಸೋಲಿಸಿದರು.

ಕ್ರೀಡಾಂಗಣದಲ್ಲಿ ಕಿಕ್ಕಿರಿದು ಸೇರಿದ್ದ ಪ್ರೇಕ್ಷಕರು ಜೊಕೊವಿಚ್ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಜೊಕೊವಿಚ್ ‘ಅಭಿಮಾನಿಗಳು ನೀಡಿದ ಸ್ವಾಗತ ನಿರೀಕ್ಷೆ ಮೀರಿದೆ‘ ಎಂದಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು