ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆಡರರ್‌ಗೆ ಪ್ರಶಸ್ತಿ ಉಳಿಸಿಕೊಳ್ಳುವ ಕನಸು

Last Updated 26 ಜೂನ್ 2018, 18:06 IST
ಅಕ್ಷರ ಗಾತ್ರ

ಪರ್ತ್‌ :ಸ್ವಿಟ್ಜರ್‌ಲೆಂಡ್‌ನ ಟೆನಿಸ್‌ ಆಟಗಾರ ರೋಜರ್‌ ಫೆಡರರ್‌ ಅವರು ಹಿಂದಿನ ಬಾರಿಯ ಹಾಪ್‌ಮನ್‌ ಕಪ್‌ ಟೆನಿಸ್‌ ಟೂರ್ನಿಯ ಮಿಶ್ರ ಡಬಲ್ಸ್‌ ವಿಭಾಗದಲ್ಲಿ ಗೆದ್ದಿದ್ದ ಪ್ರಶಸ್ತಿಯನ್ನು ಈ ಬಾರಿ ಉಳಿಸಿಕೊಳ್ಳುವ ತವಕದಲ್ಲಿದ್ದಾರೆ.

ರೋಜರ್‌ ಫೆಡರರ್‌ ಹಾಗೂ ಸ್ವಿಟ್ಜರ್‌ಲೆಂಡ್‌ನ ಬೆಲಿಂದಾ ಬೆನ್ಸಿಕ್‌ ಜೋಡಿಯು ಈ ಟೂರ್ನಿಯಲ್ಲಿ ಹಿಂದಿನ ಬಾರಿ ಪ್ರಶಸ್ತಿ ಗೆದ್ದಿತ್ತು.

‘ಈ ಟೂರ್ನಿಯಲ್ಲಿ ಉತ್ತಮ ಸಾಧನೆ ತೋರಬೇಕಿದೆ. ಡಿಸೆಂಬರ್‌ 29ರಿಂದ ಆರಂಭವಾಗುವ ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ ಟೂರ್ನಿಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಇದು ಅನುವು ಮಾಡಿಕೊಡುತ್ತದೆ’ ಎಂದು ಫೆಡರರ್‌ ಹೇಳಿದ್ದಾರೆ.

ಹಾಪ್‌ಮನ್‌ ಟೂರ್ನಿಯಲ್ಲಿ ಏಂಜಲಿಕ್‌ ಕೆರ್ಬರ್‌ ಹಾಗೂ ಅಲೆಕ್ಸಾಂಡರ್‌ ಜ್ವೆರೇವ್‌ ಜೋಡಿಯೂ ಈ ಬಾರಿ ಸ್ಪರ್ಧಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT