ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆಯ ಪ್ರಶಸ್ತಿ ಗೆದ್ದ ರೋಜರ್ ಫೆಡರರ್

Last Updated 28 ಅಕ್ಟೋಬರ್ 2019, 19:30 IST
ಅಕ್ಷರ ಗಾತ್ರ

ಬಾಸೆಲ್ : ಆಸ್ಟ್ರೇಲಿಯಾದ ಅಲೆಕ್ಸ್ ಡಿ ಮಿನೌರ್ ವಿರುದ್ಧ ನೇರ ಸೆಟ್‌ಗಳ ಜಯ ಸಾಧಿಸಿದ ರೋಜರ್ ಫೆಡರರ್ ಸ್ವಿಜರ್ಲೆಂಡ್‌ ಒಳಾಂಗಣ ಟೆನಿಸ್ ಚಾಂಪಿಯನ್‌ಷಿಪ್‌ನಲ್ಲಿ ದಾಖಲೆಯ 10ನೇ ಪ್ರಶಸ್ತಿ ತಮ್ಮದಾಗಿಸಿಕೊಂಡರು.

ತವರಿನ ಅಂಗಣದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಫೆಡರರ್ 6–2, 6–2ರಲ್ಲಿ ಜಯ ಸಾಧಿಸಿದರು. 38 ವರ್ಷದ ಅವರು ಈ ಪ್ರಶಸ್ತಿಯೊಂದಿಗೆ ಒಟ್ಟಾರೆ 103 ಸಿಂಗಲ್ಸ್ ಗರಿಗಳನ್ನು ಮುಡಿಗೇರಿಸಿಕೊಂಡ ಸಾಧನೆ ಮಾಡಿದರು.

ಪ್ಯಾರಿಸ್ ಮಾಸ್ಟರ್ಸ್‌ಗೆ ಲಭ್ಯ ಇಲ್ಲ: ವಿಶ್ವ ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿರುವ ರೋಜರ್ ಫೆಡರರ್ ಈ ವಾರ ಆರಂಭವಾಗಲಿರುವ ಪ್ಯಾರಿಸ್ ಮಾಸ್ಟರ್ಸ್ ಟೆನಿಸ್ ಟೂರ್ನಿಯಲ್ಲಿ ಆಡದೇ ಇರಲು ನಿರ್ಧರಿಸಿದ್ದಾರೆ. ಮುಂದಿನ ವರ್ಷದ ಟೂರ್ನಿಗಳಿಗಾಗಿ ಸಜ್ಜುಗೊಳ್ಳುವ ಉದ್ದೇಶದಿಂದ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಪ್ಯಾರಿಸ್ ಓಪನ್‌ನಲ್ಲಿ ಆಡದೇ ಇರಲು ನಿರ್ಧರಿಸಿರುವುದು ಫ್ರಾನ್ಸ್‌ನ ಅಭಿಮಾನಿಗಳಿಗೆ ಬೇಸರ ತಂದಿದೆ ಎಂದು ಗೊತ್ತಿದೆ. ಇದಕ್ಕೆ ಕ್ಷಮೆ ಕೋರುತ್ತೇನೆ. ನಾನು ಫಿಟ್‌ ಆಗಿದ್ದು ಯಾವುದೇ ಸಮಸ್ಯೆಗಳಿಲ್ಲ. ಆದರೂ ಮುಂದಿನ ವರ್ಷದ ಮಹತ್ವದ ಟೂರ್ನಿಗಳಿಗಾಗಿ ಈ ಟೂರ್ನಿಯಿಂದ ದೂರ ಉಳಿಯಬೇಕಾಗಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT