ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕಕ್ಕೆ ನಡಾಲ್‌; ಆರಕ್ಕೆ ರೂಡ್‌

ಎಟಿಪಿ, ಡಬ್ಲ್ಯುಟಿಎ ರ‍್ಯಾಂಕಿಂಗ್ಸ್: ಅಗ್ರಸ್ಥಾನದಲ್ಲಿ ಮುಂದುವರಿದ ಇಗಾ ಸ್ವೆಟೆಕ್‌
Last Updated 6 ಜೂನ್ 2022, 12:41 IST
ಅಕ್ಷರ ಗಾತ್ರ

ಪ್ಯಾರಿಸ್‌: ಫ್ರೆಂಚ್‌ ಓಪನ್ ಟೆನಿಸ್‌ ಟೂರ್ನಿಯಲ್ಲಿ ದಾಖಲೆಯ 14ನೇ ಕಿರೀಟ ಧರಿಸಿರುವ ರಫೆಲ್ ನಡಾಲ್‌ ಎಟಿಪಿ ರ‍್ಯಾಂಕಿಂಗ್‌ನಲ್ಲಿ ನಾಲ್ಕನೇ ಸ್ಥಾನಕ್ಕೇರಿದ್ದಾರೆ.

ಸೋಮವಾರ ಪ್ರಕಟವಾದ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಸ್ಪೇನ್‌ ಆಟಗಾರ ಒಂದು ಸ್ಥಾನ ಬಡ್ತಿ ಪಡೆದಿದ್ದಾರೆ. ಟೂರ್ನಿಯಲ್ಲಿ ರನ್ನರ್‌ಅಪ್ ಆದ ನಾರ್ವೆಯ ಕಾಸ್ಪರ್ ರೂಡ್‌ ಕೂಡ ಎರಡು ಸ್ಥಾನಗಳ ಜಿಗಿತ ಕಂಡಿದ್ದು, ಆರನೇ ಸ್ಥಾನದಲ್ಲಿದ್ದಾರೆ.

ಟೂರ್ನಿಯ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ನಡಾಲ್ ಎದುರು ಎಡವಿದ್ದ ಸರ್ಬಿಯಾದ ನೊವಾಕ್ ಜೊಕೊವಿಚ್‌ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

ಅಗ್ರಸ್ಥಾನದಲ್ಲಿ ಸ್ವೆಟೆಕ್ ಗಟ್ಟಿ: ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್ ಪ್ರಶಸ್ತಿ ವಿಜೇತೆ ಪೋಲೆಂಡ್‌ ಆಟಗಾರ್ತಿ ಇಗಾ ಸ್ವೆಟೆಕ್‌ ಡಬ್ಲ್ಯುಟಿಎ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಟೂರ್ನಿಯ ರನ್ನರ್‌ಅಪ್ ಅಮೆರಿಕದ ಕೊಕೊ ಗಫ್‌ 10 ಸ್ಥಾನಗಳ ಏರಿಕೆ ದಾಖಲಿಸಿ 13ನೇ ಸ್ಥಾನ ತಲುಪಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT