ಬುಧವಾರ, ಮೇ 18, 2022
24 °C

ಫ್ರೆಂಚ್‌ ಓಪನ್‌: ಫೈನಲ್‌ಗೆ ಸಿಟ್ಸಿಪಾಸ್‌

ಎಪಿ, ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

Prajavani

ಪ್ಯಾರಿಸ್‌: ಅಮೋಘ ಆಟವಾಡಿದ ಸ್ಟೆಫಾನೊಸ್ ಸಿಟ್ಸಿಪಾಸ್ ಅವರು ಅಲೆಕ್ಸಾಂಡರ್ ಜ್ವೆರೆವ್ ಅವರನ್ನು ಮಣಿಸಿ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಶುಕ್ರವಾರ ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್‌ ಪಂದ್ಯದ ಐದು ಸೆಟ್‌ಗಳ ಹೋರಾಟದಲ್ಲಿ ಗೆದ್ದ ಗ್ರೀಸ್ ಆಟಗಾರ, ಮೊದಲ ಬಾರಿ ಗ್ರ್ಯಾನ್‌ ಸ್ಲಾಮ್‌ವೊಂದರ ಪ್ರಶಸ್ತಿ ಸುತ್ತು ತಲುಪಿದರು.

ಫಿಲಿಪ್ ಚಾಟ್ರಿಯರ್ ಅಂಗಣದಲ್ಲಿ, ಮೂರೂವರೆ ತಾಸು ನಡೆದ ಪಂದ್ಯದಲ್ಲಿ ಐದನೇ ಶ್ರೇಯಾಂಕದ ಸಿಟ್ಸಿಪಾಸ್‌ 6-3, 6-3, 4-6, 4-6, 6-3ರಿಂದ ಜರ್ಮನಿ ಆಟಗಾರನನ್ನು ಸೋಲಿಸಿದರು. ಭಾನುವಾರ ಫೈನಲ್ ಪಂದ್ಯದಲ್ಲಿ ರಫೆಲ್ ನಡಾಲ್ ಅಥವಾ ಜೊಕೊವಿಚ್ ಅವರನ್ನು ಸಿಟ್ಸಿಪಾಸ್ ಎದುರಿಸುವರು.

ಶನಿವಾರ ನಡೆಯುವ ಮಹಿಳಾ ಸಿಂಗಲ್ಸ್‌ ಫೈನಲ್‌ನಲ್ಲಿ ರಷ್ಯಾದ ಅನಸ್ತೇಸಿಯಾ ಪೌಲಿಚೆಂಕೋವಾ ಮತ್ತು ಜೆಕ್ ಗಣರಾಜ್ಯದ ಬಾರ್ಬೊರಾ ಕ್ರೆಸಿಕೋವಾ ಸೆಣಸುವರು. ಗುರುವಾರ ನಾಲ್ಕರ ಘಟ್ಟದ ಪಂದ್ಯಗಳಲ್ಲಿ ಅನ ಸ್ತೇಸಿಯಾ, ಸ್ಲೊವೇನಿಯಾದ ತಮಾರ ಜಿಡಾನ್ಸೆಕ್‌ ವಿರುದ್ಧ 7-5, 6-3ರಲ್ಲಿ ಜಯ ಗಳಿಸಿದರೆ, ಕ್ರೆಸಿಕೋವಾ,  ಗ್ರೀಸ್‌ನ ಮರಿಯಾ ಸಕರಿ ಎದುರು 7–5, 4–6, 9–7ರಿಂದ ಗೆದ್ದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು