ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೊನೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿ: ಎಂಟರಘಟ್ಟಕ್ಕೆ ಲಕ್ಷ್ಯ, ಸಿಂಧು

Last Updated 9 ಜೂನ್ 2022, 15:54 IST
ಅಕ್ಷರ ಗಾತ್ರ

ಜಕಾರ್ತ, ಇಂಡೊನೇಷ್ಯಾ: ಜಯದ ಓಟ ಮುಂದುವರಿಸಿದ ಭಾರತದ ಲಕ್ಷ್ಯ ಸೇನ್‌ ಮತ್ತು ಪಿ.ವಿ.ಸಿಂಧು ಅವರು ಇಂಡೊನೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್‌ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ವಿಶ್ವ ಚಾಂಪಿಯನ್‌ಷಿಪ್‌ ಕಂಚಿನ ಪದಕ ವಿಜೇತ ಲಕ್ಷ್ಯ, ಪುರುಷರ ಸಿಂಗಲ್ಸ್ ಎರಡನೇ ಸುತ್ತಿನ ಪಂದ್ಯದಲ್ಲಿ21-18, 21-15ರಿಂದ ಡೆನ್ಮಾರ್ಕ್‌ನ ರಾಸ್ಮಸ್‌ ಗೆಮ್ಕೆ ಅವರನ್ನು ಪರಾಭವಗೊಳಿಸಿದರು. ಲಕ್ಷ್ಯ ಅವರಿಗೆ ವಿಶ್ವ ರ‍್ಯಾಂಕಿಂಗ್‌ನಲ್ಲಿ 13ನೇ ಸ್ಥಾನದಲ್ಲಿರುವ ರಾಸ್ಮಸ್‌ ಎದುರು 54 ನಿಮಿಷಗಳಲ್ಲಿ ಗೆಲುವು ಒಲಿಯಿತು.

ವಿಶ್ವ ಕ್ರಮಾಂಕದಲ್ಲಿ 9ನೇ ಸ್ಥಾನದಲ್ಲಿರುವ ಲಕ್ಷ್ಯ, ಮುಂದಿನ ಪಂದ್ಯದಲ್ಲಿ ಚೀನಾ ತೈಪೆಯ ಚೋವ್‌ ಟಿಯೆನ್ ಚೆನ್ ಅವರನ್ನು ಎದುರಿಸಲಿದ್ದಾರೆ.

ಮಹಿಳಾ ಸಿಂಗಲ್ಸ್ ಎರಡನೇ ಸುತ್ತಿನ ಹಣಾಹಣಿಯಲ್ಲಿ ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಸಿಂಧು23-21, 20-22, 21-11ರಿಂದ ಇಂಡೊನೇಷ್ಯಾದ ಗ್ರೆಗೊರಿಯಾ ಮರಿಸ್ಕಾ ತುಂಜುಂಗ್‌ ಅವರ ಸವಾಲು ಮೀರಿದರು.

ಜಿದ್ದಾಜಿದ್ದಿನ ಹೋರಾಟದಲ್ಲಿ ಮೊದಲ ಗೇಮ್‌ ಜಯಿಸಿದ ಸಿಂಧು, ಎರಡನೇ ಗೇಮ್‌ ಕೈಚೆಲ್ಲಿದರು. ಆದರೆ ನಿರ್ಣಾಯಕ ಮೂರನೇ ಗೇಮ್‌ನಲ್ಲಿ ಸಂಪೂರ್ಣ ಪಾರಮ್ಯ ಮೆರೆದರು.

ಎಂಟರಘಟ್ಟದ ಪಂದ್ಯದಲ್ಲಿ ಸಿಂಧು, ಥಾಯ್ಲೆಂಡ್‌ನ ರಚನಾಕ್ ಇಂತನನ್‌ ಮತ್ತು ಸ್ಕಾಟ್ಲೆಂಡ್‌ನ ಕ್ರಿಸ್ಟಿ ಗಿಲ್ಮರ್ ನಡುವಣ ಪಂದ್ಯದ ವಿಜೇತರನ್ನು ಎದುರಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT