ನವದೆಹಲಿ: ದಕ್ಷಿಣ ಕೊರಿಯಾದಲ್ಲಿ ನಡೆದ ಸಾಫ್ಟ್ ಟೆನಿಸ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಚಾರಿತ್ರಿಕ ಸಾಧನೆ ಮಾಡಿದೆ.
ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ಜಯ್ ಮೀನಾ ಮತ್ತು ಆದ್ಯಾ ತಿವಾರಿ ಜೋಡಿ ಕಂಚಿನ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.
ಸಾಫ್ಟ್ ಟೆನಿಸ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಗೆದ್ದಿರುವ ಮೊದಲ ಪದಕ ಇದಾಗಿದೆ.
17ನೇ ಸಾಫ್ಟ್ ಟೆನಿಸ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಕ್ರೀಡಾಪುಟುಗಳ ಸಾಧನೆಯನ್ನು ಕ್ರೀಡಾ ಸಚಿವ ಮನಸುಖ್ ಮಾಂಡವೀಯ ಅವರು ಅಭಿನಂದಿಸಿದ್ದಾರೆ.