ಬೆಂಗಳೂರು: ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಅವರ ತಾಯಿ, ಮಾಜಿ ಒಲಿಂಪಿಯನ್ ಬ್ಯಾಸ್ಕೆಟ್ಬಾಲ್ ಆಟಗಾರ್ತಿ ಜೆನ್ನಿಫರ್ ಪೇಸ್ (72) ಅವರು ಭಾನುವಾರ ಅನಾರೋಗ್ಯದಿಂದ ನಿಧನರಾದರು.

ಭಾರತೀಯ ಮಹಿಳಾ ಬ್ಯಾಸ್ಕೆಟ್ಬಾಲ್ನ ಪ್ರವರ್ತಕರಲ್ಲಿ ಒಬ್ಬರಾಗಿರುವ ಜೆನ್ನಿಫರ್ ಅವರು 1972ರ ಮ್ಯೂನಿಚ್ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ನಂತರ ಭಾರತ ಮಹಿಳಾ ಬ್ಯಾಸ್ಕೆಟ್ಬಾಲ್ ತಂಡದ ನಾಯಕತ್ವ ವಹಿಸಿದ್ದರು.

ಜೆನ್ನಿಫರ್ ಅವರು ಭಾರತದ ಅತ್ಯಂತ ಪ್ರತಿಷ್ಠಿತ ಕ್ರೀಡಾ ಕುಟುಂಬಕ್ಕೆ ಸೇರಿದವರು. ಅವರ ಪತಿ ದಿವಂಗತ ಡಾ.ವೇಸ್ ಪೇಸ್ ಅವರು 1972ರ ಮ್ಯೂನಿಚ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಭಾರತ ಹಾಕಿ ತಂಡದ ಸದಸ್ಯರಾಗಿದ್ದರು. ಅವರ ಪುತ್ರ ಲಿಯಾಂಡರ್ 1996ರ ಅಟ್ಲಾಂಟಾ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದಿದ್ದರು.

‘ಭಾರತೀಯ ಕ್ರೀಡೆಗಳಿಗೆ ಜೆನ್ನಿಫರ್ ಪೇಸ್ ಅವರ ಕೊಡುಗೆ ಅಪಾರ ವಾದುದು. ಅತ್ಯುತ್ತಮ ಕ್ರೀಡಾಪಟು ಮತ್ತು ಸ್ಫೂರ್ತಿದಾಯಕ ತಾಯಿಯಾಗಿ ಅವರ ಪರಂಪರೆ ಯಾವಾಗಲೂ ಸ್ಮರಣೀಯವಾಗಿರುತ್ತದೆ’ ಎಂದು ಫಿಬಾ ಏಷ್ಯಾ ಅಧ್ಯಕ್ಷ ಕೆ. ಗೋವಿಂದರಾಜ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.