ಮೆಲ್ಬರ್ನ್: ದಾಖಲೆಯ 25ನೇ ಗ್ರ್ಯಾನ್ಸ್ಲಾಮ್ ಕಿರೀಟದ ಹೊಸ್ತಿಲಲ್ಲಿರುವ ಸರ್ಬಿಯಾದ ದಿಗ್ಗಜ ನೊವಾಕ್ ಜೊಕೊವಿಚ್ ಅವರು ಭಾನುವಾರ ಆಸ್ಟ್ರೇಲಿಯಾ ಓಪನ್ ಪುರುಷರ ಸಿಂಗಲ್ಸ್ನ ಫೈನಲ್ನಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ಕಾರ್ಲೋಸ್ ಅಲ್ಕರಾಜ್ ಅವರನ್ನು ಎದುರಿಸಲಿದ್ದಾರೆ.

ಮೆಲ್ಬರ್ನ್ ಪಾರ್ಕ್ನಲ್ಲಿ 11ನೇ ಬಾರಿ ಪ್ರಶಸ್ತಿಯ ನಿರೀಕ್ಷೆಯಲ್ಲಿರುವ 38 ವರ್ಷದ ಜೊಕೊವಿಚ್ ಅವರು ಸೆಮಿಫೈನಲ್ನಲ್ಲಿ ಇಟಲಿಯ ಯಾನಿಕ್ ಸಿನ್ನರ್ ಅವರಿಗೆ ಆಘಾತ ನೀಡಿದ್ದರು. ಪ್ರಸ್ತುತ 24 ಗ್ರ್ಯಾನ್
ಸ್ಲಾಮ್ಗಳೊಂದಿಗೆ ಆಸ್ಟ್ರೇಲಿಯಾದ ಮಾರ್ಗರೇಟ್ ಕೋರ್ಟ್ ಅವರ ದಾಖಲೆ ಸರಿಗಟ್ಟಿರುವ ಜೊಕೊವಿಚ್, ಈ ಬಾರಿ ಪ್ರಶಸ್ತಿ ಗೆದ್ದರೆ ಇತಿಹಾಸ ನಿರ್ಮಿಸಲಿದ್ದಾರೆ.

ಸ್ಪೇನ್ನ ತಾರೆ ಅಲ್ಕರಾಜ್ ಅವರು ಇಲ್ಲಿ ಮೊದಲ ಬಾರಿ ಪ್ರಶಸ್ತಿ ಗೆಲ್ಲುವ ಛಲದಲ್ಲಿದ್ದಾರೆ. 22 ವರ್ಷದ ಅವರು ಈಗಾಗಲೇ ಇತರ ಮೂರು ಗ್ರ್ಯಾನ್ಸ್ಲಾಮ್ಗಳನ್ನು ತಲಾ ಎರಡು ಬಾರಿ ಗೆದ್ದಿದ್ದಾರೆ. ಇಲ್ಲಿ ಚಾಂಪಿಯನ್ ಆದರೆ ನಾಲ್ಕೂ ಗ್ರ್ಯಾನ್ಸ್ಲಾಮ್ ಕಿರೀಟ ಮುಡಿಗೇರಿಸಿಕೊಂಡ ಅತಿ ಕಿರಿಯ ವಯಸ್ಸಿನ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವರು. ಸದ್ಯ ಈ ದಾಖಲೆ ಅವರದೇ ದೇಶದ ರಫೆಲ್ ನಡಾಲ್ (24ನೇ ವಯಸ್ಸಿನಲ್ಲಿ) ಹೆಸರಿನಲ್ಲಿದೆ.

ಪಂದ್ಯ ಆರಂಭ: ಮಧ್ಯಾಹ್ನ 2

ನೇರಪ್ರಸಾರ: ಸೋನಿ ಸ್ಪೋರ್ಟ್ಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.