ಮಂಗಳವಾರ, ಜನವರಿ 31, 2023
19 °C

ಅಡಿಲೇಡ್‌ ಇಂಟರ್‌ನ್ಯಾಷನಲ್ ಟೂರ್ನಿ: ಜೊಕೊವಿಚ್‌ಗೆ ಜಯದ ಆರಂಭ

ಎಪಿ Updated:

ಅಕ್ಷರ ಗಾತ್ರ : | |

Prajavani

ಅಡಿಲೇಡ್‌: ಸರ್ಬಿಯಾದ ನೊವಾಕ್ ಜೊಕೊವಿಚ್‌ ಅವರು 2023ರ ಋತುವನ್ನು ಸಿಂಗಲ್ಸ್ ವಿಭಾಗದ ಗೆಲುವಿನೊಂದಿಗೆ ಆರಂಭಿಸಿದ್ದಾರೆ.

ಇಲ್ಲಿ ನಡೆಯುತ್ತಿರುವ ಅಡಿಲೇಡ್‌ ಇಂಟರ್‌ನ್ಯಾಷನಲ್ ಟೂರ್ನಿಯ ಮೊದಲ ಸುತ್ತಿನ ಪಂದ್ಯ ದಲ್ಲಿ ಮಂಗಳವಾರ ಅವರು 6-3, 6-2ರಿಂದ ಫ್ರಾನ್ಸ್‌ನ ಕಾನ್‌ಸ್ಟಂಟ್‌ ಲೆಸ್ಟಿನ್ ಅವರನ್ನು ಪರಾಭವಗೊಳಿಸಿದರು. ಇದರೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ ಸತತ 30ನೇ ಜಯ ಸಂಪಾದಿಸಿದರು.

ಜೊಕೊವಿಚ್‌ ಇಲ್ಲಿ ಅಗ್ರಶ್ರೇಯಾಂಕ ಪಡೆದಿದ್ದಾರೆ. ಸೋಮವಾರ ನಡೆದ ಡಬಲ್ಸ್ ವಿಭಾಗದ ಪಂದ್ಯದಲ್ಲಿ ಅವರು ಸೋತಿದ್ದರು.

ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಗೆಲುವಿನೊಂದಿಗೆ ಜೊಕೊವಿಚ್‌ ಅವರು ಸೆಮಿಫೈನಲ್‌ನಲ್ಲಿ ರಷ್ಯಾದ ಡೇನಿಯಲ್ ಮೆಡ್ವೆಡೆವ್ ಅವರಿಗೆ ಮುಖಾಮುಖಿಯಾಗುವ ಸಾಧ್ಯತೆಯಿದೆ.

ಮತ್ತೊಂದು ಪಂದ್ಯದಲ್ಲಿ ಮೆಡ್ವೆಡೆವ್‌ ಅವರು ಇಟಲಿಯ ಲೊರೆಂಜೊ ಸೊನೆಗೊ ಅವರನ್ನು ಮಣಿಸಿದರು. ರಷ್ಯಾ ಆಟಗಾರ 7–6 (6), 2–1ರಿಂದ ಮುನ್ನಡೆಯಲ್ಲಿದ್ದ ವೇಳೆ ಸೊನೆಗೊ ಗಾಯದ ಕಾರಣ ಹಿಂದೆ ಸರಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು