ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೊಕೊವಿಚ್ ಮುಡಿಗೆ French Open; ದಾಖಲೆಯ 23ನೇ ಗ್ರ್ಯಾನ್‌ಸ್ಲಾಮ್ ಕಿರೀಟ

Published 11 ಜೂನ್ 2023, 16:33 IST
Last Updated 11 ಜೂನ್ 2023, 16:33 IST
ಅಕ್ಷರ ಗಾತ್ರ

ಪ್ಯಾರಿಸ್: ಸರ್ಬಿಯಾದ ನೊವಾಕ್ ಜೊಕೊವಿಚ್, ಫ್ರೆಂಚ್ ಓಪನ್ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಜಯಿಸಿದ್ದಾರೆ.

ಈ ಮೂಲಕ ದಾಖಲೆಯ 23ನೇ ಸಲ ಗ್ರ್ಯಾನ್‌ಸ್ಲಾಮ್ ಕಿರೀಟ ಗೆದ್ದ ಸಾಧನೆ ಮಾಡಿದ್ದಾರೆ.

ಭಾನುವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ ಪಂದ್ಯದಲ್ಲಿ ಜೊಕೊವಿಚ್ ಅವರು ನಾರ್ವೆಯ ಕ್ಯಾಸ್ಪರ್‌ ರೂಡ್‌ ವಿರುದ್ಧ 7-6 (7-1), 6-3, 7-5ರ ಅಂತರದಲ್ಲಿ ಗೆಲುವು ದಾಖಲಿಸಿದರು.

ನಡಾಲ್ ದಾಖಲೆ ಮುರಿದ ಜೊಕೊವಿಚ್...

36 ವರ್ಷದ ಜೊಕೊವಿಚ್‌ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇದೀಗ ಅವರು ಅತಿ ಹೆಚ್ಚು ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿ ಗೆದ್ದ ದಾಖಲೆಯನ್ನು ತಮ್ಮದಾಗಿಸಿದ್ದಾರೆ. ಇದರೊಂದಿಗೆ ಸ್ಪೇನ್‌ನ ರಫೆಲ್‌ ನಡಾಲ್‌ ದಾಖಲೆ ಮುರಿದಿದ್ದಾರೆ. ನಡಾಲ್ 22 ಟ್ರೋಫಿ ಜಯಿಸಿದ್ದಾರೆ.

ಅದೇ ರೀತಿ ಫ್ರೆಂಚ್‌ ಓಪನ್‌ ಗೆದ್ದ ಅತಿ ಹಿರಿಯ ಆಟಗಾರ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ. ಎಲ್ಲ ನಾಲ್ಕು ಗ್ರ್ಯಾನ್‌ಸ್ಲಾಮ್‌ಗಳನ್ನು ಕನಿಷ್ಠ ಮೂರು ಸಲ ಗೆದ್ದ ಮೊದಲ ಆಟಗಾರ ಎಂಬ ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. ಈ ಹಿಂದೆ 2016 ಮತ್ತು 2021 ರಲ್ಲಿ ಇಲ್ಲಿ ಚಾಂಪಿಯನ್‌ ಆಗಿದ್ದರು.

24 ವರ್ಷದ ರೂಡ್‌ ಅವರು 2022 ರಲ್ಲಿ ಇಲ್ಲಿ ಫೈನಲ್‌ನಲ್ಲಿ ರಫೆಲ್‌ ನಡಾಲ್‌ ಎದುರು ಸೋತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT