ಗುರುವಾರ , ಏಪ್ರಿಲ್ 15, 2021
24 °C

ರ‍್ಯಾಂಕಿಂಗ್: ಅಗ್ರಸ್ಥಾನಕ್ಕೆ ಮರಳಿದ ಒಸಾಕ

ಎಎಫ್‌‍ಪಿ Updated:

ಅಕ್ಷರ ಗಾತ್ರ : | |

Prajavani

ಪ್ಯಾರಿಸ್‌: ಅಮೆರಿಕ ಮತ್ತು ಆಸ್ಟ್ರೇಲಿಯಾ ಓಪನ್‌ ಟೂರ್ನಿಗಳಲ್ಲಿ ಚಾಂಪಿಯನ್‌ ಆಗಿದ್ದ ನವೊಮಿ ಒಸಾಕ, ಸೋಮವಾರ ಬಿಡುಗಡೆಯಾಗಿರುವ ಡಬ್ಲ್ಯುಟಿಎ ಮಹಿಳಾ ಸಿಂಗಲ್ಸ್‌ ವಿಭಾಗದ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಜಪಾನ್‌ನ ಆಟಗಾರ್ತಿ ಒಸಾಕ, ಹೋದ ವಾರ ನಡೆದಿದ್ದ ರೋಜರ್ಸ್‌ ಕಪ್‌ನಲ್ಲಿ ಕ್ವಾರ್ಟರ್‌ ಫೈನಲ್‌ನಲ್ಲಿ ಸೋತಿದ್ದರು.

ಆಸ್ಟ್ರೇಲಿಯಾದ ಆ್ಯಷ್ಲೆಗ್‌ ಬಾರ್ಟಿ ಮತ್ತು ಕ್ಯಾರೋಲಿನಾ ಪ್ಲಿಸ್ಕೋವಾ ಅವರು ಈ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲಲು ವಿಫಲರಾಗಿದ್ದರು. ಹೀಗಾಗಿ 21 ವರ್ಷದ ನವೊಮಿ ಮತ್ತೆ ಅಗ್ರಪಟ್ಟ ಅಲಂಕರಿಸಿದ್ದಾರೆ. ಬಾರ್ಟಿ ಮತ್ತು ಪ್ಲಿಸ್ಕೋವಾ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳಿಗೆ ಕುಸಿದಿದ್ದಾರೆ.

ರೋಜರ್ಸ್‌ ಕಪ್‌ನಲ್ಲಿ ಚಾಂಪಿಯನ್‌ ಆಗಿದ್ದ ಕೆನಡಾದ ಬಿಯಾಂಕ ಆ್ಯಂಡ್ರೆಸ್ಕು 13ನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ಅವರು ಒಟ್ಟು 14 ಸ್ಥಾನ ಪ್ರಗತಿ ಕಂಡಿದ್ದಾರೆ.

ಅಮರಿಕದ ಸೆರೆನಾ ವಿಲಿಯಮ್ಸ್‌ ಎಂಟನೇ ಸ್ಥಾನಕ್ಕೆ ಜಿಗಿದಿದ್ದಾರೆ. ಗಾಯದ ಕಾರಣ ರೋಜರ್ಸ್ ಕಪ್‌ ಫೈನಲ್‌ನಿಂದ ಹಿಂದೆ ಸರಿದಿದ್ದ ಸೆರೆನಾ, ಎರಡು ಸ್ಥಾನ ಮೇಲೇರಿದ್ದಾರೆ.

ರುಮೇನಿಯಾದ ಸಿಮೊನಾ ಹಲೆಪ್‌ ಮತ್ತು ನೆದರ್ಲೆಂಡ್ಸ್‌ನ ಕಿಕಿ ಬರ್ಟೆನ್ಸ್‌ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನ ಕಾಪಾಡಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು