ಗುರುವಾರ , ಏಪ್ರಿಲ್ 9, 2020
19 °C

ಆಸ್ಟ್ರೇಲಿಯಾ ಓಪನ್‌ ಟೆನಿಸ್‌ ಟೂರ್ನಿ: ಪ್ರಧಾನ ಸುತ್ತಿಗೆ ಪ್ರಜ್ಞೇಶ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮೆಲ್ಬರ್ನ್‌: ಭಾರತದ ಪ್ರಜ್ಞೇಶ್‌ ಗುಣೇಶ್ವರನ್‌ ಅರ್ಹತಾ ಸುತ್ತಿನ ಅಂತಿಮ ಪಂದ್ಯದಲ್ಲಿ ಸೋತರೂ ಆಸ್ಟ್ರೇಲಿಯಾ ಓಪನ್‌ ಟೆನಿಸ್‌ ಟೂರ್ನಿಯ ಪ್ರಧಾನ ಸುತ್ತಿನಲ್ಲಿ ಆಡುವ ಅವಕಾಶ ಪಡೆದರು. ಅವರು ಮೊದಲ ಸುತ್ತಿನಲ್ಲಿ ಗೆದ್ದರೆ ವಿಶ್ವದ ಎರಡನೇ ಕ್ರಮಾಂಕದ ಆಟಗಾರ ನೊವಾಕ್‌ ಜೊಕೊವಿಚ್‌ (ಸರ್ಬಿಯಾ) ಅವರನ್ನು ಎದುರಿಸಬೇಕಾಗುತ್ತದೆ.

ಅರ್ಹತಾ ಸುತ್ತಿನ ಕೊನೆಯ ಪಂದ್ಯದಲ್ಲಿ ಎಡಗೈ ಆಟಗಾರ ಪ್ರಜ್ಞೇಶ್‌ ಲಾತ್ವಿಯಾದ ಅರ್ನೆಸ್ಟ್ಸ್ ಗುಲ್ಬಿಸ್‌ ಎದುರು ಸೋತಿದ್ದರು. ಆದರೆ ಟೂರ್ನಿಗೆ ನೇರ ಪ್ರವೇಶ ಪಡೆದಿದ್ದ ಆಟಗಾರನೊಬ್ಬ ಹಿಂದೆ ಸರಿದ ಕಾರಣ ಪ್ರಜ್ಞೇಶ್‌ ಅವರಿಗೆ ಅವಕಾಶ ಒಲಿದಿದೆ.

ಪ್ರಧಾನ ಸುತ್ತಿನ ಮೊದಲ ಪಂದ್ಯದಲ್ಲಿ ಪ್ರಜ್ಞೇಶ್‌ ಅವರು 22ನೇ ರ‍್ಯಾಂಕ್‌ನ ಜಪಾನ್‌ ಆಟಗಾರ ತತ್ಸುಮಾ ಇಟೊ ಸವಾಲನ್ನು ಎದುರಿಸಲಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು