ಮಂಗಳವಾರ, ಮಾರ್ಚ್ 9, 2021
19 °C
ಎಐಟಿಎ ಪುರುಷರ ಟೆನಿಸ್ ಚಾಂಪಿಯನ್‌ಷಿಪ್ ಇಂದಿನಿಂದ

ಎಐಟಿಎ ಪುರುಷರ ಟೆನಿಸ್ ಚಾಂಪಿಯನ್‌ಷಿಪ್ ಇಂದಿನಿಂದ: ಪ್ರಜ್ವಲ್‌ ದೇವ್‌ ಮೇಲೆ ಕಣ್ಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಎಐಟಿಎ ಪುರುಷರ ಟೆನಿಸ್‌ ಚಾಂಪಿಯನ್‌ಷಿಪ್‌, ಇಲ್ಲಿಯ ಪಡುಕೋಣೆ–ದ್ರಾವಿಡ್‌ ಸ್ಪೋರ್ಟ್ಸ್ ಎಕ್ಸ್‌ಲೆನ್ಸ್ ಕೇಂದ್ರದ ಪಿಬಿಐ–ಸಿಎಸ್‌ಇ ಟೆನಿಸ್ ಅಕಾಡೆಮಿಯಲ್ಲಿ ಸೋಮವಾರದಿಂದ ನಡೆಯಲಿದೆ. ಶನಿವಾರ ಮುಕ್ತಾಯಗೊಂಡ ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿ ವಿಜೇತ ಕರ್ನಾಟಕದ ಪ್ರಜ್ವಲ್ ದೇವ್ ಹಾಗೂ ನಿಕ್ಕಿ ಪೂಣಚ್ಚ ಅವರು ಇಲ್ಲಿಯೂ ಉತ್ತಮ ಸಾಮರ್ಥ್ಯ ಮುಂದುವರಿಸುವ ನಿರೀಕ್ಷೆಯಿದೆ.

ದೇಶದಾದ್ಯಂತ 150ಕ್ಕಿಂತ ಹೆಚ್ಚು ಆಟಗಾರರು ಟೂರ್ನಿಯಲ್ಲಿ ಭಾಗವಹಿಸಲಿದ್ದಾರೆ. 24 ಮಂದಿ ಆಟಗಾರರು ನೇರ ಅರ್ಹತೆ ಗಿಟ್ಟಿಸಿದ್ದಾರೆ.

ಫಾರ್ಚೂನ್ ಸ್ಪೋರ್ಟ್ಸ್ ಅಕಾಡೆಮಿಯೂ ಸೋಮವಾರದಿಂದ, ಎಐಟಿಎ ಟಿಎಸ್‌7 14 ವರ್ಷದೊಳಗಿನವರ ಟೂರ್ನಿಯನ್ನು ಆಯೋಜಿಸುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.