ಪುಣೆ (ಪಿಟಿಐ): ಇಲ್ಲಿ ನಡೆಯುತ್ತಿರುವ 32ನೇ ರಾಷ್ಟ್ರೀಯ ಮಾಸ್ಟರ್ಸ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ ಆಡಲು ಬಂದಿದ್ದ ತಮಿಳುನಾಡಿನ ಆಟಗಾರ ಐ.ಎಂ.ಲೂಯಿಸ್ ರಾಜ್ ಅವರು ಭಾನುವಾರ ಹೃದಯಸ್ತಂಭನದಿಂದಾಗಿ ಕುಸಿದುಬಿದ್ದು ಮೃತಪಟ್ಟರು.

65 ವರ್ಷ ದಾಟಿದ ಪುರುಷರ ಸಿಂಗಲ್ಸ್ನಲ್ಲಿ ಸ್ಪರ್ಧಿಸಿದ್ದ ರಾಜ್ ಅವರು ಶ್ರೀ ಶಿವ ಛತ್ರಪತಿ ಕ್ರೀಡಾ ಸಂಕೀರ್ಣದಲ್ಲಿ ಪಂದ್ಯ ಆಡುವಾಗ ಈ ಘಟನೆ ನಡೆದಿದೆ. ಘಟನೆಗೆ ಮೊದಲು ಅವರು ಆಂಧ್ರ ಪ್ರದೇಶದ ವಿ.ವಿ.ರಾಮಣ್ಣ ಅವರ ವಿರುದ್ಧ 2–0 ಮುನ್ನಡೆ ಸಾಧಿಸಿದ್ದರು. ಮೂರನೇ ಸೆಟ್ನಲ್ಲಿ 5–4 ಮುನ್ನಡೆಯಲ್ಲಿದ್ದರು.

ತಕ್ಷಣವೇ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಕಾರಣ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಾಜ್ ಅವರು ಮೃತಪಟ್ಟಿರುವುದಾಗಿ ಅಲ್ಲಿನ ವೈದ್ಯರು ಘೋಷಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-4-86386983

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.