ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Australian Open:ದಾಖಲೆಯ 21ನೇ ಗ್ರ್ಯಾನ್ ಸ್ಲಾಂ ಕನಸಿನೊಂದಿಗೆ ನಡಾಲ್ ಫೈನಲ್‌ಗೆ

Last Updated 28 ಜನವರಿ 2022, 8:20 IST
ಅಕ್ಷರ ಗಾತ್ರ

ಮೆಲ್ಬರ್ನ್: ಸ್ಪೇನ್‌ನ ರಫೆಲ್ ನಡಾಲ್, ದಾಖಲೆಯ 21ನೇ ಗ್ರ್ಯಾನ್ ಸ್ಲಾಂ ಕನಸಿನೊಂದಿಗೆ ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಶುಕ್ರವಾರ ಪುರುಷ ಸಿಂಗಲ್ಸ್ ವಿಭಾಗದಲ್ಲಿ ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ಆರನೇ ಶ್ರೇಯಾಂಕಿತರಾದ ನಡಾಲ್, ಏಳನೇ ಶ್ರೇಯಾಂಕಿತ ಇಟಲಿಯ ಮಟಿಯೊ ಬೆರೆಟಿನಿ ವಿರುದ್ಧ 6-3, 6-2, 3-6, 6-3ರ ಅಂತರದಲ್ಲಿ ಗೆಲುವು ದಾಖಲಿಸಿ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟರು.

ಸ್ವಿಜರ್ಲೆಂಡ್‌ನ ರೋಜರ್ ಫೆಡರರ್ ಮತ್ತು ಸರ್ಬಿಯಾದ ನೊವಾಕ್ ಜೊಕೊವಿಚ್ ಅವರೊಂದಿಗೆ 20 ಗ್ರ್ಯಾನ್ ಸ್ಲಾಂ ಪ್ರಶಸ್ತಿಗಳನ್ನು ಹಂಚಿಕೊಂಡಿರುವ ನಡಾಲ್ ಅವರೀಗ ವಿಶ್ವ ದಾಖಲೆಯ ಹೊಸ್ತಿಲಲ್ಲಿದ್ದಾರೆ.

ಭಾನುವಾರ ನಡೆಯಲಿರುವ ಫೈನಲ್‌ನಲ್ಲಿ ಗೆಲುವು ದಾಖಲಿಸಿದರೆ ನೂತನ ಇತಿಹಾಸ ರಚಿಸಲಿದ್ದಾರೆ. ಮಗದೊಂದು ಸೆಮಿಫೈನಲ್ ಪಂದ್ಯದಲ್ಲಿ ಗ್ರೀಸ್‌ನ ಸ್ಟೆಫನೋಸ್‌ ಸಿಟ್ಸಿಪಾಸ್ ಹಾಗೂ ರಷ್ಯಾದ ಡ್ಯಾನಿಲ್ ಮೆಡ್ವೆಡೆವ್ ಸೆಣಸಲಿದ್ದಾರೆ. ಇಲ್ಲಿ ಗೆದ್ದವರು ಫೈನಲ್‌ನಲ್ಲಿ ನಡಾಲ್ ಸವಾಲು ಎದುರಿಸಲಿದ್ದಾರೆ.

ಹಾಗೆಯೇ ಆರನೇ ಬಾರಿಗೆ ಆಸ್ಟ್ರೇಲಿಯನ್ ಓಪನ್‌ನಲ್ಲಿ ಫೈನಲ್‌ಗೆ ಪ್ರವೇಶಿಸಿರುವ 35 ವರ್ಷದ ನಡಾಲ್, ಎರಡನೇ ಕಿರೀಟದ ಹುಡುಕಾಟದಲ್ಲಿದ್ದಾರೆ. 2009ರಲ್ಲಿ ನಡಾಲ್ ಆಸ್ಟ್ರೇಲಿಯನ್ ಓಪನ್ ಕಿರೀಟ ಮುಡಿಗೇರಿಸಿಕೊಂಡಿದ್ದರು.

ನಡಾಲ್ 13 ಬಾರಿ ಫ್ರೆಂಚ್ ಓಪನ್, ನಾಲ್ಕು ಸಲ ಅಮೆರಿಕನ್ ಓಪನ್ ಮತ್ತು ಎರಡು ಬಾರಿ ವಿಂಬಲ್ಡನ್ ಪ್ರಶಸ್ತಿಗಳನ್ನು ಜಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT