ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರ‍್ಯಾಂಕಿಂಗ್‌: ಎರಡನೇ ಸ್ಥಾನಕ್ಕೇರಿದ ನೊವಾಕ್‌

Last Updated 15 ಅಕ್ಟೋಬರ್ 2018, 14:25 IST
ಅಕ್ಷರ ಗಾತ್ರ

ಪ್ಯಾರಿಸ್‌: ಸರ್ಬಿಯಾದ ನೊವಾಕ್‌ ಜೊಕೊವಿಚ್‌, ಸೋಮವಾರ ಬಿಡುಗಡೆಯಾಗಿರುವ ಪುರುಷರ ಸಿಂಗಲ್ಸ್‌ ವಿಭಾಗದ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.

ಭಾನುವಾರ ನಡೆದ ಶಾಂಘೈ ಮಾಸ್ಟರ್ಸ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದ ನೊವಾಕ್‌ ಒಟ್ಟು ಪಾಯಿಂಟ್ಸ್‌ ಅನ್ನು 7445ಕ್ಕೆ ಹೆಚ್ಚಿಸಿಕೊಂಡು ಈ ಸಾಧನೆ ಮಾಡಿದ್ದಾರೆ.

ಸ್ವಿಟ್ಜರ್‌ಲೆಂಡ್‌ನ ರೋಜರ್‌ ಫೆಡರರ್‌ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ. ಸ್ಪೇನ್‌ನ ರಫೆಲ್‌ ನಡಾಲ್‌ ಅಗ್ರಸ್ಥಾನ ಕಾಪಾಡಿಕೊಂಡಿದ್ದಾರೆ. ಅರ್ಜೆಂಟೀನಾದ ವುವಾನ್‌ ಮಾರ್ಟಿನ್‌ ಡೆಲ್‌ಪೊಟ್ರೊ ಮತ್ತು ಜರ್ಮನಿಯ ಅಲೆಕ್ಸಾಂಡರ್‌ ಜ್ವೆರೆವ್‌ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನಗಳಲ್ಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ರುಮೇನಿಯಾದ ಸಿಮೊನಾ ಹಲೆಪ್‌ ಅಗ್ರಸ್ಥಾನದಲ್ಲಿದ್ದಾರೆ. ಅವರ ಖಾತೆಯಲ್ಲಿ 7421 ಪಾಯಿಂಟ್ಸ್‌ ಇವೆ.

ಡೆನ್ಮಾರ್ಕ್‌ನ ಕ್ಯಾರೋಲಿನ್‌ ವೋಜ್ನಿಯಾಕಿ ಎರಡನೇ ಸ್ಥಾನದಲ್ಲಿದ್ದು, ಜರ್ಮನಿಯ ಏಂಜಲಿಕ್‌ ಕೆರ್ಬರ್‌ ಮೂರನೇ ಸ್ಥಾನ ಕಾಪಾಡಿಕೊಂಡಿದ್ದಾರೆ.

ಜಪಾನ್‌ನ ನವೊಮಿ ಒಸಾಕ, ಜೆಕ್‌ ಗಣರಾಜ್ಯದ ಕ್ಯಾರೋಲಿನಾ ಪ್ಲಿಸ್ಕೋವಾ ಅವರು ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನಗಳಲ್ಲಿದ್ದಾರೆ. ಅಮೆರಿಕದ ಸೆರೆನಾ ವಿಲಿಯಮ್ಸ್‌ 17ನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT