ಪ್ಯಾರಿಸ್: ದಾಖಲೆಯ 24ನೇ ಗ್ರ್ಯಾನ್ಸ್ಲಾಮ್ ಪ್ರಶಸ್ತಿ ದಾಖಲೆ ಸರಿಗಟ್ಟುವ ಅಮೆರಿಕದ ಮಾಜಿ ವಿಶ್ವ ನಂ.1 ಆಟಗಾರ್ತಿ ಸೆರೆನಾ ವಿಲಿಯಮ್ಸ್ ಕನಸಿಗೆ ಹಿನ್ನೆಡೆಯಾಗಿದೆ.

ಪ್ರತಿಷ್ಠಿತ ಫ್ರೆಂಚ್ ಓಪನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಭಾನುವಾರ ನಡೆದ ಪ್ರಿ-ಕ್ವಾರ್ಟರ್ ಪಂದ್ಯದಲ್ಲಿ ಏಳನೇ ಶ್ರೇಯಾಂಕಿತೆ ಸೆರೆನಾ ವಿಲಿಯಮ್ಸ್ ಅವರು 21 ಶ್ರೇಯಾಂಕಿತೆ ಕಜಕಿಸ್ತಾನದ ಎಲೆನಾ ರೈಬಕಿನಾ ವಿರುದ್ಧ 6-3, 7-5ರ ಅಂತರದಲ್ಲಿ ಮುಗ್ಗರಿಸಿ ಕೂಟದಿಂದಲೇ ಹೊರಬಿದ್ದಿದ್ದಾರೆ.

23 ಬಾರಿಯ ಗ್ರ್ಯಾನ್ಸ್ಲಾಮ್ ಚಾಂಪಿಯನ್ 39ರ ಹರೆಯದ ಸೆರೆನಾ ಅವರಿಗೆ 21 ವರ್ಷದ ಯುವ ಆಟಗಾರ್ತಿಯ ಸವಾಲನ್ನು ಗೆಲ್ಲಲು ಸಾಧ್ಯವಾಗಲಿಲ್ಲ.

ಸೆರೆನಾ ಕೊನೆಯದಾಗಿ 2016ನೇ ಇಸವಿಯಲ್ಲಿ ಫ್ರೆಂಚ್ ಓಪನ್ನಲ್ಲಿ ಫೈನಲ್ ಪ್ರವೇಶಿಸಿದ್ದರು. ಅಂದ ಹಾಗೆ ತಮ್ಮ ವೃತ್ತಿ ಜೀವನದಲ್ಲಿ ಮೂರು ಬಾರಿ (2002, 2013 ಮತ್ತು 2015) ಫ್ರೆಂಚ್ ಓಪನ್ ಕಿರೀಟವನ್ನು ಮುಡಿಗೇರಿಸಿದ್ದಾರೆ.

ಇದನ್ನೂ ಓದಿ:ಫ್ರೆಂಚ್ ಓಪನ್ ಟೆನಿಸ್ ಟೂರ್ನಿ: ಹಿಂದೆ ಸರಿದ ರೋಜರ್ ಫೆಡರರ್

ಗ್ರ್ಯಾನ್ಸ್ಲಾಮ್ ಇತಿಹಾಸದಲ್ಲೇ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಅತಿ ಹೆಚ್ಚು 24 ಬಾರಿ ಪ್ರಶಸ್ತಿ ಗೆದ್ದ ದಾಖಲೆಯು ಆಸ್ಟ್ರೇಲಿಯಾದ ಮಾಜಿ ಆಟಗಾರ್ತಿ ಮಾರ್ಗರೇಟ್ ಕೋರ್ಟ್ ಹೆಸರಲ್ಲಿದೆ. ಅವರು ಗ್ರ್ಯಾನ್ಸ್ಲಾಮ್ನಲ್ಲಿ 19 ಡಬಲ್ಸ್ ಹಾಗೂ 21 ಮಿಕ್ಸೆಡ್ ಡಬಲ್ಸ್ ಪ್ರಶಸ್ತಿಗಳನ್ನು ಗೆದ್ದ ದಾಖಲೆ ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.