ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್‌: ಮೆಡ್ವೆಡೆವ್‌ಗೆ ಪ್ರಶಸ್ತಿ

Last Updated 14 ಅಕ್ಟೋಬರ್ 2019, 19:30 IST
ಅಕ್ಷರ ಗಾತ್ರ

ಶಾಂಘೈ: ರಷ್ಯಾದ ಡೇನಿಯಲ್‌ ಮೆಡ್ವೆಡೆವ್‌ ಅವರು ಶಾಂಘೈ ಮಾಸ್ಟರ್ಸ್‌ ಟೆನಿಸ್‌ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ್ದಾರೆ.

ಭಾನುವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಫೈನಲ್‌ನಲ್ಲಿ ಡೇನಿಯಲ್‌ 6–4, 6–1 ನೇರ ಸೆಟ್‌ಗಳಿಂದ ಜರ್ಮನಿಯ ಐದನೇ ಶ್ರೇಯಾಂಕದ ಆಟಗಾರ ಅಲೆಕ್ಸಾಂಡರ್‌ ಜ್ವೆರೆವ್‌ ಅವರನ್ನು ಪರಾಭವಗೊಳಿಸಿದರು. ಇದರೊಂದಿಗೆ ಈ ಋತುವಿನಲ್ಲಿ ನಾಲ್ಕನೇ ಪ್ರಶಸ್ತಿ ಗೆದ್ದ ಸಾಧನೆ ಮಾಡಿದರು.

ಮೆಡ್ವೆಡೆವ್‌ ಎದುರು 4–0 ಜಯದ ದಾಖಲೆ ಹೊಂದಿದ್ದ ಜ್ವೆರೆವ್‌, ಈ ಪಂದ್ಯದಲ್ಲೂ ಗೆಲ್ಲುವ ನೆಚ್ಚಿನ ಆಟಗಾರ ಎನಿಸಿದ್ದರು. ಅಮೆರಿಕ ಓಪನ್‌ನಲ್ಲಿ ರನ್ನರ್‌ ಅಪ್‌ ಆಗಿದ್ದ ಮೆಡ್ವೆಡೆವ್‌ ಈ ಬಾರಿ ಎದುರಾಳಿಗೆ ತಿರುಗೇಟು ನೀಡುವಲ್ಲಿ ಯಶಸ್ವಿಯಾದರು.

ಮೊದಲ ಸೆಟ್‌ನ ಆರಂಭದಲ್ಲಿ ಉಭಯ ಆಟಗಾರರು ಜಿದ್ದಾಜಿದ್ದಿನಿಂದ ಸೆಣಸಿದರು. ನಂತರ ಮೆಡ್ವೆಡೆವ್‌ ಮಿಂಚಿದರು. ಎರಡು ಬಾರಿ ಎದುರಾಳಿಯ ಸರ್ವ್‌ ಮುರಿದ ಅವರು ತಮ್ಮ ಸರ್ವ್‌ಗಳನ್ನೂ ಉಳಿಸಿಕೊಂಡು ಸೆಟ್‌ ಕೈವಶ ಮಾಡಿಕೊಂಡರು.

23 ವರ್ಷದ ಡೇನಿಯಲ್‌, ಎರಡನೇ ಸೆಟ್‌ನಲ್ಲಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಿದರು. ಮತ್ತೆ ಎದುರಾಳಿಯ ಸರ್ವ್‌ಗಳನ್ನು ಮುರಿದ ಅವರು 5–0 ಮುನ್ನಡೆ ಪಡೆದರು. ನಂತರವೂ ಮಿಂಚಿನ ಸಾಮರ್ಥ್ಯ ತೋರಿ ಖುಷಿಯ ಕಡಲಲ್ಲಿ ತೇಲಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT