ಟೆನಿಸ್‌ ಕ್ರೀಡೆಗೆ ಸಂಪೂರ್ಣ ಸಹಕಾರ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌

7

ಟೆನಿಸ್‌ ಕ್ರೀಡೆಗೆ ಸಂಪೂರ್ಣ ಸಹಕಾರ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌

Published:
Updated:

ಬೆಂಗಳೂರು: ಟೆನಿಸ್‌ ಅಸೋಸಿಯೇಷನ್ ನಿಯೋಗ ಸೋಮವಾರ ಉಪಮುಖ್ಯಮಂತ್ರಿ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಸೋಮವಾರ ಭೇಟಿ ಮಾಡಿ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಟೆನಿಸ್‌ ಮೈದಾನ ನಿರ್ಮಾಣ ಹಾಗೂ ಟೆನಿಸ್‌ ಕ್ರೀಡೆ ಸಂಬಂಧ ಇತರೆ ವಿಚಾರಗಳ ಬಗ್ಗೆ ಚರ್ಚಿಸಿತು.

ಈ ವೇಳೆ ಸಮಾಜ ಕಲ್ಯಾಣ ಸಚಿವ ಹಾಗೂ ಅಸೋಸಿಯೇಷನ್ ಸದಸ್ಯ ಪ್ರಿಯಾಂಕ ಖರ್ಗೆ, ಟೆನಿಸ್‌ ಆಟಗಾರ ರೋಹನ್ ಬೋಪಣ್ಣ ಇತರರು ಇದ್ದರು. 

ಕಬ್ಬನ್‌ಪಾರ್ಕ್‌ನಲ್ಲಿರುವ ಟೆನಿಸ್‌ ಕೋರ್ಟ್‌ ಇದ್ದರೂ, ಕೆಲ ಷರತ್ತುಗಳಿರುವುದರಿಂದ ಎಲ್ಲರಿಗೂ ಈ ಕೋರ್ಟ್‌ ಬಳಕೆಯಾಗುತ್ತಿಲ್ಲ. ಇದನ್ನು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಷ ನೀಡಿ ಎಂದು ಸದಸ್ಯರು ಮನವಿ ಮಾಡಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಜಿ. ಪರಮೇಶ್ವರ್, ‘ಟೆನಿಸ್‌ ಅಸೋಸಿಯೇಷನ್ ಸದಸ್ಯರು ನನ್ನನ್ನು ಭೇಟಿ ಮಾಡಿ ಹಲವು ವಿಚಾರ ಚರ್ಚಿಸಿದ್ದಾರೆ. ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಟೆನಿಸ್‌ ಮೈದಾನ ನಿರ್ಮಾಣದ ಬಗ್ಗೆ ಹಲವು ಸಲಹೆಗಳನ್ನು ನೀಡಿದ್ದಾರೆ’ ಎಂದು ತಿಳಿಸಿದರು.

‘ನಮ್ಮ ಸರ್ಕಾರ ಎಲ್ಲ ಬಗೆಯ ಕ್ರೀಡೆಗಳಿಗೂ ಉತ್ತೇಜನ‌ ನೀಡುತ್ತಾ ಬಂದಿದೆ. ಕ್ರೀಡೆಗೆ ಸಂಬಂಧಿಸಿದ ಎಲ್ಲ ರೀತಿಯ ಸವಲತ್ತೂ ನೀಡಲಾಗುತ್ತಿದೆ. ‌ಬೆಂಗಳೂರು ಕ್ರೀಡಾ ರಾಜಧಾನಿಯಾಗಬೇಕು‌ ಎಂಬುದೇ ನಮ್ಮ ಸರ್ಕಾರದ ಬಯಕೆ. ಈ ನಿಟ್ಟಿನಲ್ಲಿ ಬಜೆಟ್‌ನಲ್ಲಿ ಕ್ರೀಡೆಗೆ ಸಾಕಷ್ಟು ಅನುದಾನ ನೀಡಿದ್ದೇವೆ’ ಎಂದರು.

ನಗರದ ಹೊರವಲಯದಲ್ಲಿ ಸ್ಪೋರ್ಟ್ಸ್‌ ವಿಲೇಜ್ ನಿರ್ಮಾಣ, ಕ್ರೀಡಾ ವಿಶ್ವವಿದ್ಯಾಲಯ, ಕ್ರೀಡಾ ಸಂಬಂಧಿತ ಸಲಕರಣೆ ಉತ್ಪಾದನೆಗೆ‌ ಅವಕಾಶ ಸೇರಿದಂತೆ ಹಲವು ಯೋಜನೆಗಳನ್ನು ಸಿದ್ಧಪಡಿಸಿದ್ದೇವೆ. ಒಟ್ಟಾರೆ ಕ್ರೀಡೆಗೆ ನಮ್ಮ ಬೆಂಬಲವಿರಲಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !