ಆಸ್ಟ್ರೇಲಿಯಾ ಓಪನ್ ಟೆನಿಸ್| ಜೊಕೊವಿಚ್‌ಗೆ ಸಿಟ್ಸಿಪಸ್ ಸವಾಲು

ಮೆಲ್ಬರ್ನ್ (ಎಎಫ್‌ಪಿ): ತಾನು ಆಡಿದ ಈ ಹಿಂದಿನ ಎಲ್ಲ ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಫೈನಲ್‌ಗಳಲ್ಲಿ ವಿಜಯ ಸಾಧಿಸಿರುವ ಸರ್ಬಿಯಾದ ನೊವಾಕ್ ಜೊಕೊವಿಚ್ ಈಗ ಮತ್ತೊಂದು ಪ್ರಶಸ್ತಿಯ ಹೊಸ್ತಿಲಲ್ಲಿ ಬಂದು ನಿಂತಿದ್ದಾರೆ.
ಇಲ್ಲಿ 10ನೇ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಜೊಕೊವಿಚ್ ಅವರಿಗೆ ಗ್ರೀಸ್‌ನ ಯುವ ಆಟಗಾರ ಸ್ಟೆಫಾನೊಸ್ ಸಿಟ್ಸಿಪಸ್ ಸವಾಲು ಎದುರಾಗಿದೆ. ಈ ಟ್ರೋಫಿ ಗೆದ್ದರೆ ಜೊಕೊವಿಚ್ ಅವರು ಸ್ಪೇನ್‌ನ ರಫೆಲ್ ನಡಾಲ್ ಅವರ ದಾಖಲೆ (22 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ) ಸರಿಗಟ್ಟಲಿದ್ದಾರೆ.
ಕೊರೊನಾ ಲಸಿಕೆ ಹಾಕಿಸಿಕೊಳ್ಳದ ಕಾರಣ ಜೊಕೊವಿಚ್ ಅವರು ಕಳೆದ ಆವೃತ್ತಿಯ ಟೂರ್ನಿಯಲ್ಲಿ ಆಡುವ ಅವಕಾಶ ಕಳೆದುಕೊಂಡಿದ್ದರು.
ಭಾನುವಾರ ರಾಡ್ ಲೇವರ್ ಅರೆನಾದಲ್ಲಿ ನಡೆಯಲಿರುವ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್‌ನಲ್ಲಿ ಜೊಕೊವಿಚ್ ಗೆಲುವಿನ ಫೆವರೀಟ್ ಆಗಿದ್ದರೂ ಮೊದಲ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ತವಕದಲ್ಲಿರುವ ಸಿಟ್ಸಿಪಸ್ ತೀವ್ರ ಪೈಪೋಟಿ ನೀಡುವ ನಿರೀಕ್ಷೆಯಿದೆ. ಈ ಪಂದ್ಯದಲ್ಲಿ ಗೆದ್ದವರು ವಿಶ್ವ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಲಿದ್ದು, ಸ್ಪೇನ್‌ನ ಕಾರ್ಲೊಸ್ ಅಲ್ಕರಾಜ್ ಅವರನ್ನು ಹಿಂದಿಕ್ಕಲಿದ್ದಾರೆ.
24 ವರ್ಷದ ಸಿಟ್ಸಿಪಸ್, 2021ರ ಫ್ರೆಂಚ್ ಓಪನ್ ಟೂರ್ನಿಯಲ್ಲಿ ಫೈನಲ್ ತಲುಪಿದ್ದರು. ಆಗ ಪ್ರಶಸ್ತಿ ಸುತ್ತಿನಲ್ಲಿ ಜೊಕೊವಿಚ್ ಎದುರೇ ಸೋತಿದ್ದರು. ಈಗ ಪ್ರಶಸ್ತಿ ಬರ ನೀಗಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.