ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಟಿಪಿ ಚಾಲೆಂಜರ್ ಟೆನಿಸ್‌ ಟೂರ್ನಿ: ಸೆಮಿಫೈನಲ್‌ಗೆ ನಗಾಲ್‌

ಎಟಿಪಿ 100 ಚಾಲೆಂಜರ್ ಟೂರ್ನಿಯಲ್ಲಿ ಸೆಮಿಫೈನಲ್‌
Published 8 ಜೂನ್ 2024, 4:24 IST
Last Updated 8 ಜೂನ್ 2024, 4:24 IST
ಅಕ್ಷರ ಗಾತ್ರ

ಹೀಲ್‌ಬ್ರಾನ್, (ಜರ್ಮನಿ): ಭಾರತದ ಅಗ್ರಮಾನ್ಯ ಟೆನಿಸ್‌ ಸಿಂಗಲ್ಸ್ ಆಟಗಾರ ಸುಮಿತ್ ನಗಾಲ್‌ ಅವರು ಇಲ್ಲಿ ನಡೆಯುತ್ತಿರುವ ಎಟಿಪಿ 100 ಚಾಲೆಂಜರ್ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಸಿದರು.

ವಿಶ್ವ ರ್‍ಯಾಂಕಿಂಗ್‌ನಲ್ಲಿ 95ನೇ ಸ್ಥಾನದಲ್ಲಿರುವ ನಗಾಲ್‌, ಶುಕ್ರವಾರ ಕ್ವಾರ್ಟರ್‌ ಫೈನಲ್‌ನಲ್ಲಿ 6-1, 7-6 (7-4) ರಿಂದ ರಷ್ಯಾದ ಇವಾನ್ ಗಕೋವ್ ಅವರನ್ನು ಮಣಿಸಿ ಮುನ್ನಡೆದರು.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಸಿಂಗಲ್ಸ್ ಸ್ಪರ್ಧೆಗೆ ಅರ್ಹತೆ ಗಳಿಸುವ ನಿಟ್ಟಿನಲ್ಲಿ ರ‍್ಯಾಂಕಿಂಗ್‌ ಪಾಯಿಂಟ್ಸ್‌ ಸಂಪಾದಿಸುವತ್ತಾ ನಗಾಲ್‌ ಚಿತ್ತ ಹರಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT