ಬೆಂಗಳೂರಿನಲ್ಲಿರುವ ರೋಹನ್ ಬೋಪಣ್ಣ ಟೆನಿಸ್ ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ನಿಕಿ, ಮೊದಲ ಸೆಟ್ನಲ್ಲಿ ಸುಲಭವಾಗಿ ಎದುರಾಳಿಯ ಸವಾಲು ಮೀರಿದರು. ಎರಡನೇ ಸೆಟ್ನಲ್ಲಿ ಜಿದ್ದಾಜಿದ್ದಿನ ಪೈಪೋಟಿ ಕಂಡುಬಂತು. ಅಗ್ರಶ್ರೇಯಾಂಕದ ಆಟಗಾರ ನಿಕಿ, ‘ಟೈ ಬ್ರೇಕರ್’ನಲ್ಲಿ ಪರಿಣಾಮಕಾರಿಯಾಗಿ ಆಡಿ ಗೆಲುವಿನ ತೋರಣ ಕಟ್ಟಿದರು.