ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್‌: ಹಿಂದೆ ಸರಿದ ನಿಶಿಕೋರಿ

Last Updated 31 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ಮೆಲ್ಬರ್ನ್‌: ಮೊಣಕೈ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿರುವವಿಶ್ವದ 13ನೇ ಕ್ರಮಾಂಕದ ಆಟಗಾರ ಕೀ ನಿಶಿಕೋರಿ, ಈ ತಿಂಗಳು ನಡೆಯುವ ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಎಂದು ಸಂಘಟಕರು ಸೋಮವಾರ ತಿಳಿಸಿದ್ದಾರೆ.‌

30 ವರ್ಷದ ನಿಶಿಕೋರಿ, ಅಮೆರಿಕ ಓಪನ್‌ ಟೂರ್ನಿಯ ಮೂರನೇ ಸುತ್ತಿನಲ್ಲಿ ಅಲೆಕ್ಸ್‌ ಡಿಮಿನಾರ್‌ ಅವರಿಗೆ ಮಣಿದ ನಂತರ ಯಾವುದೇ ಟೂರ್ನಿಯಲ್ಲಿ ಆಡಿರಲಿಲ್ಲ. ಅಕ್ಟೋಬರ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.‌‌ ಆಸ್ಟ್ರೇಲಿಯನ್‌ ಓಪನ್‌ನಿಂದ ಹಿಂದೆ ಸರಿದ ಎರಡನೇ ಪ್ರಮುಖ ಆಟಗಾರ ಇವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT