ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವನ್‌ ಶ್ರೇಷ್ಠ ಸಾಧನೆ

Last Updated 4 ಮಾರ್ಚ್ 2019, 19:09 IST
ಅಕ್ಷರ ಗಾತ್ರ

ನವದೆಹಲಿ : ಭಾರತದ ಡಬಲ್ಸ್‌ ವಿಭಾಗದ ಟೆನಿಸ್‌ ಆಟಗಾರ ಜೀವನ್‌ ನೆಡುಂಚೆಳಿಯನ್‌, ಸೋಮವಾರ ಬಿಡುಗಡೆಯಾಗಿರುವ ಎಟಿಪಿ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ 68ನೇ ಸ್ಥಾನಕ್ಕೇರಿದ್ದಾರೆ.

ಇದು ಜೀವನ್‌ ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯಾಗಿದೆ. ಇತ್ತೀಚೆಗೆ ದುಬೈಯಲ್ಲಿ ನಡೆದಿದ್ದ ಎಟಿಪಿ–500 ಟೂರ್ನಿಯಲ್ಲಿ ಪುರವ ರಾಜಾ ಜೊತೆ ಆಡಿದ್ದ ಜೀವನ್‌, ಸೆಮಿಫೈನಲ್‌ ಪ್ರವೇಶಿಸಿದ್ದರು. ಈ ಮೂಲಕ 225 ಪಾಯಿಂಟ್ಸ್‌ ಕಲೆಹಾಕಿದ್ದರು.

ಲಿಯಾಂಡರ್‌ ಪೇಸ್‌ ಅವರು 96ನೇ ಸ್ಥಾನಕ್ಕೆ ಇಳಿದಿದ್ದಾರೆ. ಅವರು 23 ಸ್ಥಾನ ಕಳೆದುಕೊಂಡಿದ್ದಾರೆ.

ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಸ್ವಿಟ್ಜರ್‌ಲೆಂಡ್‌ನ ರೋಜರ್‌ ಫೆಡರರ್‌, ನಾಲ್ಕನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ. ರೋಜರ್‌ ಅವರು ದುಬೈ ಓಪನ್‌ನಲ್ಲಿ ಚಾಂಪಿಯನ್‌ ಆಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT