ಮಿಯಾಮಿ ಗಾರ್ಡನ್ಸ್, ಅಮೆರಿಕ (ಎಪಿ): ಹಾಲಿ ವಿಂಬಲ್ಡನ್ ಚಾಂಪಿಯನ್ ಎಲೆನಾ ರೈಬಾಕಿನಾ ಮಿಯಾಮಿ ಓಪನ್ ಟೆನಿಸ್ ಟೂರ್ನಿಯಲ್ಲಿ ಗೆಲುವಿನ ಓಟ ಮುಂದುವರಿಸಿದ್ದಾರೆ.
ಇಲ್ಲಿ ನಡೆಯುತ್ತಿರುವ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ಕಜಕಸ್ತಾನದ ರೈಬಾಕಿನಾ 6-3, 6-0ರಿಂದ ಇಟಲಿಯ ಮಾರ್ಟಿನಾ ಟ್ರೆವಿಸನ್ ಅವರನ್ನು ಪರಾಭವಗೊಳಿಸಿದರು. ಇದರೊಂದಿಗೆ ಸತತ 12ನೇ ಪಂದ್ಯದಲ್ಲಿ ಜಯ ಗಳಿಸಿದರು.
ಆಕ್ರಮಣಕಾರಿ ಆಟವಾಡಿದ ರೈಬಾಕಿನಾ ಈ ಪಂದ್ಯದಲ್ಲಿ 10 ಏಸ್‌ಗಳನ್ನು ಸಿಡಿಸಿದರು. ಆ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟರು.
ಇನ್ನೊಂದು ಪಂದ್ಯದಲ್ಲಿ ಅಮೆರಿಕದ ಜೆಸ್ಸಿಕಾ ಪೆಗುಲಾ 4-6, 6-3, 7-6 (7/2)ರಿಂದ ರಷ್ಯಾದ ಅನಸ್ತಾಸಿಯಾ ಪೊಟಪೊವಾ ಎದುರು ಗೆದ್ದು ನಾಲ್ಕರ ಘಟ್ಟ ತಲುಪಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.